Shivamogga | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ಸಾಂದರ್ಭಿಕ ಚಿತ್ರ
ಶಿವಮೊಗ್ಗ : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 22 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದ್ದು, ಸಂತ್ರಸ್ತ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ನಗರದ ಪ್ರದೇಶವೊಂದರಲ್ಲಿ 22 ವರ್ಷದ ಯುವಕ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಸಂಬಂಧ ನಗರದ ತೀರ್ಥನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಪೂರ್ಣಗೊಳಿಸಿದ ಅಂದಿನ ಪಿಐ ಮಂಜುನಾಥ್ ಬಿ. ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದ್ದರು.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಽಶರಾದ ನಿಂಗನಗೌಡ ಬಿ. ಪಾಟೀಲ್ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹವಾಸ ಮತ್ತು 1,10,000 ರೂ. ದಂಡ, ನೊಂದ ಬಾಲಕಿಗೆ 5,00,000 ರೂ. ಪರಿಹಾರವನ್ನು ನೀಡಲು ಆದೇಶಿಸಿದ್ದಾರೆ.