×
Ad

Shivamogga |ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯ ಕೊಲೆ ಪ್ರಕರಣ; ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Update: 2026-02-24 15:07 IST

ಶಿವಮೊಗ್ಗ: ಶಿವಮೊಗ್ಗದ ಬಡಾವಣೆಯೊಂದರಲ್ಲಿ ನಡೆದ 10ನೇ ತರಗತಿಯ ಅಪ್ರಾಪ್ತ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮೂಲಕ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಒಟ್ಟು 15 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸೂಚನೆಯ ಮೇರೆಗೆ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಘೋಷಿತ ಪರಿಹಾರದಲ್ಲಿ 10 ಲಕ್ಷ ರೂಪಾಯಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಾಗೂ ಉಳಿದ 5 ಲಕ್ಷ ರೂಪಾಯಿಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಹತ್ಯೆ ನಡೆದ ಬಡಾವಣೆ ಸೇರಿದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಮುಂಬರುವ ಜಾತ್ರೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News