×
Ad

ಶಿವಮೊಗ್ಗ: ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿ ಆತ್ಮಹತ್ಯೆ

Update: 2025-11-05 14:25 IST

ಶಿವಮೊಗ್ಗ(ನ.05): ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಬುಧವಾರ ನಡೆದಿದೆ.

ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಆತ್ಮಹತ್ಯೆ ಮಾಡಿಕೊಂಡ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್‌ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News