ಶಿವಮೊಗ್ಗ: ಮೆರವಣಿಗೆ ಆರಂಭವಾಗಿ ಸುಮಾರು 500 ಮೀಟರ್ ಸಾಗುವಷ್ಟರಲ್ಲಿ ಅಂಬಾರಿ ಹೊತ್ತ ಸೋಮಣ್ಣ ಎಂಬ ಆನೆ ಏಕಾಏಕಿ ಹಿಂದಕ್ಕೆ ಓಡಿ ದಾಳಿ ನಡೆಸಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ತಿಳಿಸಿದ್ದಾರೆ.

ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಆದರೆ, ಚಾಮುಂಡೇಶ್ವರಿ ವಿಗ್ರಹ ಹಾಗೂ ಅಂಬಾರಿ ಕೆಳಕ್ಕೆ ಬಿದ್ದು ಹಾನಿಗೊಳಗಾಗಿವೆ. ತಕ್ಷಣವೇ ಅವುಗಳನ್ನು ತೆರವುಗೊಳಿಸಲಾಗಿದೆ. ಘಟನೆಯಿಂದ ಕೆಲವು ವಾಹನಗಳು ಜಖಂಗೊಂಡಿವೆ ಎಂದು ತಿಳಿಸಿದರು.

ಘಟನೆ ನಡೆದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆಯ ಕುರಿತು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಯಾರೂ ಘಟನಾ ಸ್ಥಳಕ್ಕೆ ಆಗಮಿಸಬಾರದು. ಎಲ್ಲರೂ ಫ್ರೀಡಂ ಪಾರ್ಕ್‌ಗೆ ತೆರಳಿ, ಅಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor