×
Ad

ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯೆ ಮೃತ್ಯು

Update: 2025-06-20 10:00 IST

ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದ ಸನಾ ಅವರು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದರು.

ಜೂನ್ 15 ರ ಮಧ್ಯಾಹ್ನ ಎರ್ಟಿಗಾ ಕಾರಿನಲ್ಲಿ ಸುಮಾರು ಐದಾರು ಜನರಿದ್ದ ಯುವ ವೈದ್ಯರ ತಂಡ, ಹೊಸನಗರದ ಪ್ರವಾಸಿ ತಾಣಕ್ಕೆ ತೆರಳುತ್ತಿತ್ತು. ಶಿವಮೊಗ್ಗ ನಗರದ ಹೊರವಲಯ ತ್ಯಾವರೆಕೊಪ್ಪ ಹುಲಿ ಸಿಂಹಧಾಮದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿತ್ತು.

ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಸನಾ ರಾಬಿಯಾ ಕೌಸರ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ  ಮೃತಪಟ್ಟಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News