Shivamogga | ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಮೃತ್ಯು

Update: 2026-07-18 10:46 IST

ಶ್ರೀಕಾಂತ್ 

ಶಿವಮೊಗ್ಗ : ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ.

ಶ್ರೀಕಾಂತ್ ಅವರು ಸ್ನೇಹಿತರೊಂದಿಗೆ ಶುಕ್ರವಾರ ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿ, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಮುಂಜಾನೆ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎನ್ನಲಾಗಿದೆ.

ಆದರೆ ರಾತ್ರಿ ವೇಳೆ ಅವರಿಗೆ ತೀವ್ರ ಅಸ್ವಸ್ಥತೆ ಉಂಟಾಗಿ ತಂಗಿದ್ದ ಮನೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಹೊಸನಗರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ನಿರ್ಮಾಪಕ ಭಾ.ಮ. ಹರೀಶ್ ಅವರ ಮಗ ಕೊಡಚಾದ್ರಿ ಗಿರಿ ಪ್ರವಾಸಕ್ಕೆ ಬಂದು ಹೃದಯಾಘಾತದಿಂದ ನಿಧನ ಹೊಂದಿದ್ದರು. ಪ್ರವಾಸದ ಸಂದರ್ಭದಲ್ಲಿ ಸಂಭವಿಸಿರುವ ಇದು ಎರಡನೇ ಘಟನೆಯಾಗಿದೆ


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News