×
Ad

ಸಿದ್ದಾಪುರ: ಮಂಗನಕಾಯಿಲೆ ಬಾಧಿತ ಮಹಿಳೆ ಮೃತ್ಯು

Update: 2024-02-26 12:52 IST

ಸಾಂದರ್ಭಿಕ ಚಿತ್ರ

ಸಿದ್ದಾಪುರ, ಫೆ.26: ಮಂಗನಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ರವಿವಾರ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕ್ಯೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 60 ವರ್ಷದ ಮಹಿಳೆ ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ.

ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೂರು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದರೊಂದಿಗೆ ಸಿದ್ದಾಪುರ ತಾಲೂಕಿನಲ್ಲಿ ಒಂದೇ ವಾರದಲ್ಲಿ ಇಬ್ಬರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದಂತಾಗಿದೆ. ತಾಲೂಕಿನಲ್ಲಿ ಇಲ್ಲಿಯವರೆಗೆ 43 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News