ರಾಜ್ಯದ ಅತಿದೊಡ್ಡ ಕೇಬಲ್ ಆಧಾರಿತ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
Update: 2025-07-14 15:21 IST
ಸಾಗರ: ಶರಾವತಿ ನದಿಗೆ ಬಾಗಿನ ಅರ್ಪಿಸುವ ಮೂಲಕ ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್ ಜೋಶಿ ಅವರು ಉದ್ಘಾಟಿಸಿದರು.
ಮೊದಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಉದ್ಘಾಟನಾ ಕಲ್ಲುಗಳನ್ನು ಅನಾವರಣಗೊಳಿಸುವ ಮೂಲಕ ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಸೇತುವೆ ಉದ್ಘಾಟನೆಯನ್ನು ಅಧಿಕೃತಗೊಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ, ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರುಗಳಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಆರುಣ್, ಭಾರತಿ ಶೆಟ್ಟಿ, ಡಾ.ಧನಂಜಯ ಸರ್ಜಿ ಸೇರಿದಂತೆ ಸ್ಥಳೀಯ ಮುಖಂಡರುಗಳು ಭಾಗಿಯಾಗಿದ್ದರು.
ಸಿಗಂದೂರು ಸೇತುವೆಯು ರಾಜ್ಯದ ಅತಿದೊಡ್ಡ ಹಾಗೂ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿದೆ.