ಶಿವಮೊಗ್ಗ | ಕಳ್ಳತನ ಪ್ರಕರಣ; ಆರೋಪಿಯ ಬಂಧನ
ಶಿವಮೊಗ್ಗ: ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ಕಂತೆ ಕಂತೆ ಹಣ ಹಾಗೂ ಲಕ್ಷಾಂತರ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಗೋಪಾಳ ನಿವಾಸಿ ಆಟೋ ಚಾಲಕ ಅಶ್ರಫ್ ವುಲ್ಲಾ (35) ಬಂಧಿತ ಆರೋಪಿ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಸಿ ಬ್ಲಾಕ್‌ನ ಮನೆಯೊಂದರಲ್ಲಿ ಸೆ.17ರಂದು ಹಗಲು ಹೊತ್ತಿನಲ್ಲೆ ಕಳ್ಳತನವಾಗಿತ್ತು. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಬಂಧಿತನಿಂದ ರೂ.22.74 ಲಕ್ಷ ನಗದು, ರೂ,11.70 ಲಕ್ಷ ಮೌಲ್ಯದ 130 ಗ್ರಾಂ ಚಿನ್ನದ ಆಭರಣ, ರೂ,65 ಸಾವಿರ ಮೌಲ್ಯದ 550 ಗ್ರಾಂ ಬೆಳ್ಳಿ ಅಭರಣ ವಶಕ್ಕೆ ಪಡೆದಿದ್ದಾರೆ.
ತುಂಗಾ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ರಂಗನಾಥ್, ಹರೀಶ್ ಎಂ.ಜಿ, ಅನುಷಾ ಮತ್ತು ಚೈತ್ರಾ, ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿ ಇಂದ್ರೇಶ, ಗುರು ಮತ್ತು ವಿಜಯ, ಚಾಲಕ ಪುನೀತ್ ಅವರನ್ನು ಒಳಗೊಂಡ ತನಿಖಾ ತಂಡ ಆರೋಪಿಯನ್ನು ಬಂಧಿಸಿದೆ.