×
Ad

ತೀರ್ಥಹಳ್ಳಿ | ಬೈಕ್ -ಬಸ್ ನಡುವೆ ಢಿಕ್ಕಿ : ಯುವಕ ಮೃತ್ಯು

Update: 2025-12-11 11:05 IST

ತೀರ್ಥಹಳ್ಳಿ: ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊರ್ವ ಮೃತಪಟ್ಟ ಘಟನೆ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಪುನೀತ್ (26 ) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಯುವಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ತೀರ್ಥಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News