×
Ad

ಬಿಹಾರದಲ್ಲಿ ಎನ್‌ಡಿಎ ಭಾರೀ ಮುನ್ನಡೆ | ಪ್ರಧಾನಿ ಮೋದಿ ನೇತೃತ್ವ, ನಿತೀಶ್ ಕುಮಾರ್ ನಾಯಕತ್ವ ಮೆಚ್ಚಿದ ಜನ : ಯಡಿಯೂರಪ್ಪ

Update: 2025-11-14 15:33 IST

ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ : ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ದೊಡ್ಡ ಮಟ್ಟಿಗೆ ಸ್ಥಾನಗಳನ್ನು ಗಳಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬಿಹಾರ ಚುನಾವಣಾ ಫಲಿತಾಂಶ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎನ್‌ಡಿಎ 190 ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ನೇತೃತ್ವದ, ನಿತೀಶ್ ಕುಮಾರ್ ಅವರ ನಾಯತ್ವವನ್ನು ಜನರು ಮಚ್ಚಿದ್ದಾರೆ ಎಂದರು.

ಮುಂಬರುವ ದಿನಗಳಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ದೊಡ್ಡ ಸಾಧನೆ ಮಾಡಲಿದೆ. ಕರ್ನಾಟಕದಲ್ಲಿ ಇದೇ ರೀತಿ ದೊಡ್ಡ ಗೆಲುವನ್ನು ಕಾಣಬೇಕು ಎಂದು ಕೆಲಸ ಮಾಡುತ್ತಿದ್ದೇವೆ. ನಮ್ಮ ಪ್ರಯತ್ನವನ್ನು ನಾವು ಮುಂದುವರಿಸುತ್ತಿದ್ದೇವೆ ಎಂದರು.

ಬಿಹಾರದಲ್ಲಿ ಸಿಎಂ ಆಯ್ಕೆ ವಿಚಾರದಲ್ಲಿ ಅಮಿತ್ ಶಾ ಹಾಗೂ ನರೇಂದ್ರ ಮೋದಿಯವರ ನಿರ್ಧಾರವೇ ಅಂತಿಮ. ಈ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ ಎಂದರು.

ನಿರೀಕ್ಷೆ ಮೀರಿದ ಫಲಿತಾಂಶ : ಬಿ.ವೈ.ರಾಘವೇಂದ್ರ

ಇಡೀ ದೇಶದ ಜನ ಮತ್ತೊಮ್ಮೆ ಎನ್‌ಡಿಎ ಪರವಾಗಿ ಆಶೀರ್ವಾದ ಮಾಡುತ್ತಿದ್ದಾರೆ ಎಂಬುದಕ್ಕೆ ಬಿಹಾರದ ಫಲಿತಾಂಶವೇ ಸಾಕ್ಷಿ. ನಿರೀಕ್ಷೆ ಮೀರಿದ ಫಲಿತಾಂಶ ಲಭಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಬಿಹಾರ ಚುನಾವಣಾ ಫಲಿತಾಂಶ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಹಾಘಟ ಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯೇ ಸೋಲು, ಗೆಲುವಿನ ಮಧ್ಯೆ ಸಿಲುಕಿದ್ದಾರೆ. ಹಿಂದುಳಿದವರು, ಅಲ್ಪಸಂಖ್ಯಾತರು ಹೆಚ್ಚಿರುವ ಕ್ಷೇತ್ರಗಳಲ್ಲಿಯೂ ಬಿಜೆಪಿ, ನಿತೀಶ್ ಕುಮಾರ್ ಮತ್ತು ಎನ್‌ಡಿಎ ಪರವಾಗಿ ಜನ ಒಲವು ತೋರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಗೆ ಬಿಹಾರದ ಜನರು ಬೆಂಬಲ ನೀಡಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News