×
Ad

ವಾರಣಾಸಿ ಅತ್ಯಾಚಾರ ಪ್ರಕರಣದ ಬಗ್ಗೆ ʼಗೋದಿ ಮಾಧ್ಯಮʼಗಳು ಮೌನ : ಬಿ.ಕೆ.ಹರಿಪ್ರಸಾದ್ ಆಕ್ರೋಶ

Update: 2025-04-09 18:50 IST

ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಪ್ರಧಾನಿ ಮೋದಿ ಪ್ರತಿನಿಧಿಸುವ ಉತ್ತರಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ 19 ವರ್ಷದ ಯುವತಿಯನ್ನು 7 ದಿನಗಳ ಕಾಲ 23 ಪಾಪಿಗಳು ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರಕಾರದಲ್ಲಿ ಯುವತಿಯರಿಗೆ, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ಇಂತಹ ಭೀಭತ್ಸ ಘಟನೆಗಳು ಸಾಮಾನ್ಯದಂತಾಗಿದ್ದು, ‘ಗೋದಿ ಮಾಧ್ಯಮಗಳು’ ಮೌನವಾಗಿದೆ ಎಂದು ಕಿಡಿಗಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಸುಪ್ರೀಂ ಕೋರ್ಟ್ ಎರಡು ದಿನಗಳ ಹಿಂದೆ ನ್ಯಾಯಾಧೀಶರಾದ ಸಂಜೀವ್ ಖನ್ನಾ ಅವರ ನೇತೃತ್ವದ ತ್ರಿಸದಸ್ಯ ಪೀಠ ಛೀಮಾರಿ ಹಾಕಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲೇ ದುಷ್ಕೃತ್ಯ ನಡೆದಿದ್ದರೂ ಪ್ರಧಾನಿ ಮೌನವಹಿಸಿರುವುದು ಸಮಾಜವೇ ತಲೆ ತಗ್ಗಿಸುವಂತಿದೆ ಎಂದು ಅವರು ಟೀಕಿಸಿದ್ದಾರೆ.

ಕೂಡಲೇ ಸರ್ಕಾರ ಸಂತ್ರಸ್ಥೆಯ ನೆರವಿಗೆ ಧಾವಿಸಿ, ಅತ್ಯಾಚಾರ ಎಸೆಗಿರುವ ದುಷ್ಕರ್ಮಿಗಳಿಗೆ ಶಿಕ್ಷೆಗೊಳಪಡಿಸಬೇಕು ಎಂದು ಹರಿಪ್ರಸಾದ್ ಒತ್ತಾಯಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News