ಸೂರ್ಯಕುಮಾರ್ ದಾಖಲೆ ಮುರಿದ ಅಭಿಷೇಕ್ ಶರ್ಮಾ
Photo Credit : x@BCCI
ಇಂದೋರ್, ಅ. 11: ಟಿ-20 ಕ್ರಿಕೆಟ್‌ನಲ್ಲಿ ತಮ್ಮ ದಾಖಲೆಯ ಪ್ರದರ್ಶನ ಮುಂದುವರಿಸಿರುವ ಅಭಿಷೇಕ್ ಶರ್ಮಾ, 2,000 ರನ್ ಪೂರೈಸಲು ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿದ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು.
ವೆಸ್ಟ್‌ಇಂಡೀಸ್ ವಿರುದ್ಧ ರವಿವಾರ ನಡೆದ ಮೂರನೇ ಟಿ-20 ಪಂದ್ಯದ ವೇಳೆ ಈ ಸಾಧನೆ ಮಾಡಿದರು.
ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅಭಿಷೇಕ್, 1,024 ಎಸೆತಗಳಲ್ಲಿ 2,000 ರನ್ ಪೂರೈಸಿ ನೂತನ ಮೈಲಿಗಲ್ಲು ತಲುಪಿದರು. ಈ ಮೂಲಕ ಟಿ-20 ಕ್ರಿಕೆಟ್‌ನಲ್ಲಿ ಕಡಿಮೆ ಎಸೆತಗಳಲ್ಲಿ 2,000 ರನ್ ಪೂರ್ಣಗೊಳಿಸಿದ ಬ್ಯಾಟರ್ ಎನಿಸಿಕೊಂಡರು. ಈ ಹಿಂದೆ ಸೂರ್ಯಕುಮಾರ್ ಯಾದವ್ 1,164 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪಿದ್ದರು. ಆಸ್ಟ್ರೇಲಿಯಾದ ಆ್ಯರನ್ ಫಿಂಚ್ 1,283 ಎಸೆತಗಳನ್ನು ಎದುರಿಸಿದ್ದರು.
ಅಭಿಷೇಕ್, ವೆಸ್ಟ್‌ಇಂಡೀಸ್ ವಿರುದ್ಧ ಕೇವಲ 30 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಐದು ಸಿಕ್ಸರ್‌ಗಳ ನೆರವಿನಿಂದ 69 ರನ್ ಗಳಿಸಿದರು.