×
Ad

ವಿಶ್ವಕಪ್ 2023: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನ

Update: 2023-10-30 14:00 IST

Photo: X/@cricketworldcup

ಪುಣೆ: ಶ್ರೀಲಂಕಾ ತಂಡದೆದುರು ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಅಫ‍್ಘಾನಿಸ್ತಾನ ತಂಡವು ಫೀಲ್ಡಿಂಗ್ ಆಯ್ದುಕೊಂಡಿದೆ.

ಈ ಬಾರಿಯ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಲೀಗ್ ಹಂತದಲ್ಲಿ ಮಣಿಸಿರುವ ಈ ಎರಡೂ ತಂಡಗಳ ನಡುವೆ ಸಮಬಲದ ಪೈಪೋಟಿ ನಡೆಯುವ ನಿರೀಕ್ಷೆ ಇದೆ.

ಮೊದಲ ಮೂರು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡವು, ನಂತರದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್ ತಲುಪುವ ಆಸೆಯನ್ನು ಜೀವಂತವಾಗಿ ಉಳಿಸಿಕೊಂಡಿದೆ. ಅಂಕಪಟ್ಟಿಯಲ್ಲಿ ಐದನೆಯ ಸ್ಥಾನದಲ್ಲಿರುವ ಶ್ರೀಲಂಕಾ ತಂಡವು, ಸೆಮಿಫೈನಲ್ ತಲುಪಬೇಕಿದ್ದರೆ ಈ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾದ ಒತ್ತಡದಲ್ಲಿದೆ.

ತಾನಾಡಿರುವ ಐದು ಪಂದ್ಯಗಳ ಪೈಕಿ ಎರಡು ಪಂದ್ಯಗಳ ಗೆಲುವು ಹಾಗೂ ಮೂರು ಪಂದ್ಯಗಳ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಏಳನೆಯ ಸ್ಥಾನದಲ್ಲಿರುವ ಅಫ‍್ಘಾನಿಸ್ತಾನ ತಂಡವೂ ಕೂಡಾ ಸೆಮಿಫೈನಲ್ ಆಸೆಯನ್ನು ಜೀವಂತವಾಗಿ ಉಳಿಸಿಕೊಳ್ಳಬೇಕಿದ್ದರೆ ಈ ಪಂದ್ಯವನ್ನು ಗೆಲ್ಲಲೇಬೇಕಿದೆ. ಹೀಗಾಗಿ ಎರಡೂ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯುವ ನಿರೀಕ್ಷೆಯಲ್ಲಿ ಕ್ರಿಕೆಟ್ ಪ್ರೇಮಿಗಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News