ಅಜಿತ್ ಅಗರ್ಕರ್ (Photo: PTI)

ಹೊಸ ದಿಲ್ಲಿ: ಭಾರತೀಯ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಅಕ್ಟೋಬರ್ 4ಕ್ಕೆ ಅಂತ್ಯಗೊಳ್ಳಲಿದ್ದು, ಅವರು ಆ ಹುದ್ದೆಯಲ್ಲಿ ಮತ್ತೆ ಮುಂದುವರಿಯದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ PTI ಸುದ್ದಿ ಸಂಸ್ಥೆ ವರದಿ ಮಾಡಿದೆ. ತಮ್ಮ ಈ ನಿರ್ಧಾರದ ಮಾಹಿತಿಯನ್ನು ಮಾಜಿ ಮಧ್ಯಮ ವೇಗಿ ಅಜಿತ್ ಅಗರ್ಕರ್ ಅವರು ಈಗಾಗಲೇ ಬಿಸಿಸಿಐಗೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಅಕ್ಟೋಬರ್ 4ರಂದು ಅಜಿತ್ ಅಗರ್ಕರ್ ಅವರ ಆಯ್ಕೆ ಸಮಿತಿ ಮುಖ್ಯಸ್ಥ ಅಧಿಕಾರಾವಧಿ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಮುಂಬೈನಲ್ಲಿ ನಡೆದ ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಜಿತ್ ಅಗರ್ಕರ್ ಅವರ ಭವಿಷ್ಯದ ಕುರಿತು ನಿರ್ಧರಿಸುವ ಅಧಿಕಾರವನ್ನು ಬಿಸಿಸಿಐನ ಪದಾಧಿಕಾರಿಗಳಿಗೆ ಬಿಸಿಸಿಐ ಸದಸ್ಯರ ಘಟಕ ನೀಡಿತು.

“ಆಯ್ಕೆ ಸಮಿತಿಗಳಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ಪದಾಧಿಕಾರಿಗಳಿಗೆ ನೀಡಲಾಗಿದೆ” ಎಂದು ಸಭೆಯ ಅಂತ್ಯದಲ್ಲಿ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor