ಏಷ್ಯನ್ ಗೇಮ್ಸ್: ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಅನ್ನು ರಾಣಿ
Update: 2023-10-03 19:02 IST
PHOTO : PTI
ಹ್ಯಾಂಗ್ ಝೌ : ಜಾವೆಲಿನ್ ಎಸೆತಗಾರ್ತಿ ಅನ್ನು ರಾಣಿ ಮಂಗಳವಾರ ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಜಯಿಸಿದರು. ಆ ಮೂಲಕ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 31ರ ಹರೆಯದ ಅವರು 19ನೇ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 62.92 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. 2014ರ ಏಷ್ಯನ್ ಗೇಮ್ಸ್‌ನಲ್ಲಿ ಅನ್ನು ರಾಣಿ ಕಂಚಿನ ಪದಕ ಗೆದ್ದಿದ್ದರು.