ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ತಲುಪಿದ ಅರ್ಜುನ್ ತೆಂಡೂಲ್ಕರ್
ಅರ್ಜುನ್ ತೆಂಡೂಲ್ಕರ್ | Photo Credit : PTI
ಪೋರ್ವೊರಿಮ್: ಗೋವಾ ತಂಡದ ಆಲ್‌ರೌಂಡರ್ ಅರ್ಜುನ್ ತೆಂಡೂಲ್ಕರ್ ಶುಕ್ರವಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ತಲುಪಿದ್ದಾರೆ.
ಭಾರತದ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್, ಮಹಾರಾಷ್ಟ್ರ ತಂಡದ ವಿರುದ್ಧದ ರಣಜಿ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
2022-23ನೇ ಋತುವಿನಲ್ಲಿ ಗೋವಾ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಅರ್ಜುನ್ ತೆಂಡೂಲ್ಕರ್, ತಮ್ಮ ವೃತ್ತಿ ಜೀವನದಲ್ಲಿ ಐದು ವಿಕೆಟ್‌ಗಳ ಗೊಂಚಲನ್ನೂ ಪಡೆದಿದ್ದಾರೆ. ಇದಲ್ಲದೆ, ಗೋವಾ ಪರ ತಮ್ಮ ಚೊಚ್ಚಲ ಪಂದ್ಯದಲ್ಲಿ ರಾಜಸ್ಥಾನದ ವಿರುದ್ಧ ಶತಕವನ್ನೂ ಗಳಿಸಿದ್ದಾರೆ.
ಅರ್ಜುನ್ ತೆಂಡೂಲ್ಕರ್ ಅವರ 50 ವಿಕೆಟ್‌ಗಳ ಸಾಧನೆಯಲ್ಲಿ ಈ ರಣಜಿ ಋತುವಿನಲ್ಲೇ 13 ವಿಕೆಟ್‌ಗಳು ಅವರ ಖಾತೆಗೆ ಜಮೆಯಾಗಿವೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 50 ವಿಕೆಟ್ ಪಡೆದಿರುವ ಅರ್ಜುನ್ ತೆಂಡೂಲ್ಕರ್, ತಮ್ಮ ತಂದೆ ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯಲು ಇನ್ನೂ 22 ವಿಕೆಟ್‌ಗಳನ್ನು ಪಡೆಯಬೇಕಿದೆ. ಸಚಿನ್ ತೆಂಡೂಲ್ಕರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆದಿದ್ದರು.