ಏಷ್ಯ ಕಪ್ : ಪಾಕಿಸ್ತಾನದ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ
Update: 2025-09-14 23:22 IST
PC | x.com/BCCI
ದುಬೈ: ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರವಿವಾರ ಭಾರತ ತಂಡವು 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ತಾನ ತಂಡವು 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಭಾರತ ತಂಡವು 25 ಎಸೆತ ಬಾಕಿ ಇರುವಂತೆ ಮೂರು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿ ಜಯಭೇರಿ ಬಾರಿಸಿತು.
ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಅವರು 47 ರನ್ ಗಳಿಸಿ ಅಜೇಯರಾಗಿ ಉಳಿದರು.