ಏಶ್ಯಕಪ್ ಫೈನಲ್: ಭಾರತ ವಿರುದ್ಧ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ
Update: 2023-09-17 15:01 IST
Photo Source: Twitter
ಕೊಲಂಬೊ, ಸೆ.17: ಏಶ್ಯಕಪ್ ಕ್ರಿಕೆಟ್ ಟೂರ್ನಮೆಂಟ್ ಫೈನಲ್ ಪಂದ್ಯದಲ್ಲಿ ರವಿವಾರ ಭಾರತ ವಿರುದ್ಧ ಟಾಸ್ ಜಯಿಸಿದ ಶ್ರೀಲಂಕಾದ ನಾಯಕ ದಸುನ್ ಶನಕ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಶ್ರೀಲಂಕಾ ಆಡುವ 11ರ ಬಳಗದಲ್ಲಿ ಒಂದು ಬದಲಾವಣೆ ಮಾಡಿದ್ದು, ಗಾಯಗೊಂಡಿರುವ ಪ್ರಮುಖ ಸ್ಪಿನ್ನರ್ ಮಹೀಶ್ ತೀಕ್ಣ ಬದಲಿಗೆ ಹೇಮಂತಾಗೆ ಅವಕಾಶ ನೀಡಲಾಗಿದೆ.
ಬಾಂಗ್ಲಾದೇಶ ವಿರುದ್ಧ ಪಂದ್ಯವನ್ನು ಸೋತಿರುವ ಭಾರತ ತಂಡದ ಆಡುವ 11ರ ಬಳಗದಲ್ಲಿ ಗಾಯಾಳು ಅಕ್ಷರ್ ಪಟೇಲ್ ಬದಲಿಗೆ ವಾಶಿಂಗ್ಟನ್ ಸುಂದರ್ ಅವಕಾಶ ಪಡೆದಿದ್ದಾರೆ. ಬಾಂಗ್ಲಾದೇಶ ವಿರುದ್ಧ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ , ಮುಹಮ್ಮದ್ ಸಿರಾಜ್ ಹಾಗೂ ಜಸ್ ಪ್ರೀತ್ ಬುಮ್ರಾ ವಾಪಸಾಗಿದ್ದಾರೆ