×
Ad

ಏಶ್ಯನ್ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ 4-0 ಅಂತರದ ಜಯ

Update: 2023-08-09 22:24 IST

ಹರ್ಮನ್‌ಪ್ರೀತ್ ಸಿಂಗ್, Photo Credit: Hockey India

 ಚೆನ್ನೈ, ಆ.9: ನಾಯಕ ಹರ್ಮನ್‌ಪ್ರೀತ್ ಸಿಂಗ್ ಗಳಿಸಿದ ಅವಳಿ ಗೋಲುಗಳ ನೆರವಿನಿಂದ ಮೂರು ಬಾರಿಯ ಚಾಂಪಿಯನ್ ಭಾರತದ ಪುರುಷರ ಹಾಕಿ ತಂಡ ಏಶ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 4-0 ಗೋಲುಗಳ ಅಂತರದಿಂದ ಮಣಿಸಿದೆ.

ಈಗಾಗಲೇ ಸೆಮಿ ಫೈನಲ್‌ಗೆ ತಲುಪಿರುವ ಭಾರತವು ಬುಧವಾರ ಮೇಯರ್ ರಾಧಾಕೃಷ್ಣನ್ ಸ್ಟೇಡಿಯಮ್‌ನಲ್ಲಿ ನಡೆದ ಹೈವೋಲ್ಟೇಜ್ ಅಂತಿಮ ಸುತ್ತಿನ ರೌಂಡ್ ರಾಬಿನ್ ಲೀಗ್ ಪಂದ್ಯದಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿತು.ಈ ಸೋಲಿನೊಂದಿಗೆ ಪಾಕ್ ತಂಡ ಸೆಮಿ ಫೈನಲ್ ರೇಸ್‌ನಿಂದ ಹೊರ ಬಿದ್ದಿದೆ.

ನಾಯಕ ಹರ್ಮನ್‌ಪ್ರೀತ್ 15ನೇ ಹಾಗೂ 20ನೇ ನಿಮಿಷದಲ್ಲಿ ಅವಳಿ ಗೋಲು ಗಳಿಸಿ ಮೊದಲಾರ್ಧದ ಅಂತ್ಯಕ್ಕೆ ಭಾರತವು 2-0 ಮುನ್ನಡೆ ಸಾಧಿಸುವಲ್ಲಿ ನೆರವಾದರು. ಪಾಕ್ ಉತ್ತಮ ಆರಂಭವನ್ನು ಪಡೆದರೂ ಅದನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾಯಿತು. 36ನೇ ನಿಮಿಷದಲ್ಲಿ ಜುಗ್ರಾಜ್ ಸಿಂಗ್ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿ ಭಾರತಕ್ಕೆ 3-0 ಮುನ್ನಡೆ ಒದಗಿಸಿಕೊಟ್ಟರು.

55ನೇ ನಿಮಿಷದಲ್ಲಿ ಗೋಲು ಗಳಿಸಿದ ಆಕಾಶ್‌ದೀಪ್ ಸಿಂಗ್ ಭಾರತದ ಗೆಲುವಿನ ಅಂತರವನ್ನು ಹಿಗ್ಗಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News