Photo Credit: olympics

ನಗೋಯ: ಭಾರತದ ಪುರುಷರ ಬ್ಯಾಡ್ಮಿಂಟನ್ ತಂಡವು 2026ರ ಏಶ್ಯನ್ ಗೇಮ್ಸ್‌ನಲ್ಲಿ ಸೆಮಿ ಫೈನಲ್‌ಗೆ ಪ್ರವೇಶಿಸುವ ಮೂಲಕ ಪದಕವನ್ನು ಖಚಿತಪಡಿಸಿದೆ.

ಮಂಗಳವಾರ ನಡೆದ ಅಂತಿಮ-8ರ ಪಂದ್ಯದಲ್ಲಿ ಭಾರತ ತಂಡವು ಜಪಾನ್ ತಂಡವನ್ನು 3-0 ಅಂತರದಿಂದ ಸೋಲಿಸಿದೆ.

ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ್ಯ ಸೇನ್ ಅವರು ಐದು ಅಂಕಗಳ ಹಿನ್ನಡೆಯಿಂದ ಚೇತರಿಸಿಕೊಂಡು ಕೊಡೈ ನರಯೊಕಾರನ್ನು 11-21, 21-5, 21-19 ಗೇಮ್‌ಗಳ ಅಂತರದಿಂದ ಮಣಿಸಿದರು.

ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಡಬಲ್ಸ್ ಪಂದ್ಯದಲ್ಲಿ ಟಕುರೊ ಹೊಕಿ ಹಾಗೂ ಯುಗೊ ಕೊಬಯಶಿ ಅವರನ್ನು 21-18, 24-22 ನೇರ ಗೇಮ್‌ಗಳಿಂದ ಸೋಲಿಸಿದರು.

ಕನ್ನಡಿಗ ಆಯುಷ್ ಶೆಟ್ಟಿ ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಕೊಕಿ ವಟನಬೆ ಅವರನ್ನು 21-10, 21-19 ಅಂತರದಿಂದ ಮಣಿಸಿ ಭಾರತಕ್ಕೆ 3-0 ಮುನ್ನಡೆ ಒದಗಿಸಿಕೊಟ್ಟರು.

ಭಾರತ ಬುಧವಾರ ನಡೆಯಲಿರುವ ಸೆಮಿ ಫೈನಲ್‌ನಲ್ಲಿ ಚೀನಾ ಅಥವಾ ದಕ್ಷಿಣ ಕೊರಿಯಾ ತಂಡವನ್ನು ಎದುರಿಸಲಿದೆ.

ಹಿಂದಿನ ಆವೃತ್ತಿಯ ಗೇಮ್ಸ್‌ನಲ್ಲಿ ಭಾರತವು ಪುರುಷರ ಟೀಮ್ ಸ್ಪರ್ಧೆಯ ಫೈನಲ್‌ನಲ್ಲಿ ಚೀನಾ ವಿರುದ್ಧ ಸೋಲನುಭವಿಸಿ ಬೆಳ್ಳಿ ಪದಕ ಜಯಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor