×
Ad

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿ: ಅಗ್ರ ಸ್ಥಾನ ಕಾಯ್ದುಕೊಂಡ ಆಸ್ಟ್ರೇಲಿಯ

Update: 2025-12-07 23:27 IST

 Photo Credit : PTI

ಬ್ರಿಸ್ಬೇನ್: ಇಂಗ್ಲೆಂಡ್ ತಂಡವನ್ನು ಎರಡನೇ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಗಳ ಅಂತರದಿಂದ ಮಣಿಸಿದ ಆಸ್ಟ್ರೇಲಿಯ ಕ್ರಿಕೆಟ್ ತಂಡವು 2025-26ರ ಸಾಲಿನ ಆ್ಯಶಸ್ ಸರಣಿಯಲ್ಲಿ 2-0 ಮುನ್ನಡೆ ಪಡೆದಿದೆ.

ಐದು ಪಂದ್ಯಗಳಲ್ಲಿ ಐದರಲ್ಲಿ ಜಯ ಸಾಧಿಸಿರುವ ಆಸ್ಟ್ರೇಲಿಯ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ.

ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಪಾಕಿಸ್ತಾನ ಹಾಗೂ ಭಾರತ ಅಗ್ರ-5ರಲ್ಲಿ ಸ್ಥಾನ ಪಡೆದಿವೆ.

ಆರನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ತಂಡವು ಇದೀಗ ಏಳನೇ ಸ್ಥಾನಕ್ಕೆ ಕುಸಿದಿದೆ.

ಸ್ವದೇಶದಲ್ಲಿ ಶನಿವಾರ ಕೊನೆಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಡ್ರಾ ಸಾಧಿಸಿರುವ ನ್ಯೂಝಿಲ್ಯಾಂಡ್ ತಂಡವು ಆರನೇ ಸ್ಥಾನಕ್ಕೇರಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News