×
Ad

ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಿಂದ ಆಸ್ಟ್ರೇಲಿಯ ತಂಡದ ನಾಯಕಿ ಅಲಿಸಾ ಹೀಲಿ ಔಟ್

Update: 2025-10-21 20:47 IST

ಅಲಿಸಾ ಹೀಲಿ | Photo Credit : NDTV 

ಹೊಸದಿಲ್ಲಿ, ಅ.21: ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕಿ ಅಲಿಸಾ ಹೀಲಿ ಗಾಯದ ಸಮಸ್ಯೆಯ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಮಹಿಳೆಯರ ಏಕದಿನ ವಿಶ್ವಕಪ್ ಪಂದ್ಯದಿಂದ ಹೊರಗುಳಿದಿದ್ದಾರೆ.

ವಿಶ್ವಕಪ್ ಪಂದ್ಯಾವಳಿಯಲ್ಲಿ ಸದ್ಯ ಗರಿಷ್ಠ ರನ್ ಸ್ಕೋರರ್ ಆಗಿರುವ ಹೀಲಿ ಶನಿವಾರ ತರಬೇತಿಯ ವೇಳೆ ಗಾಯಗೊಂಡಿದ್ದರು. 35ರ ವಯಸ್ಸಿನ ಹೀಲಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ 2 ಶತಕಗಳ ಸಹಿತ ಒಟ್ಟು 294 ರನ್ ಗಳಿಸಿದ್ದಾರೆ.

ಹೀಲಿ ಅನುಪಸ್ಥಿತಿಯಲ್ಲಿ ತಹ್ಲಿಯಾ ಮೆಕ್‌ಗ್ರಾತ್ ಆಸ್ಟ್ರೇಲಿಯ ತಂಡವನ್ನು ನಾಯಕಿಯಾಗಿ ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ತಂಡವು ಶನಿವಾರ ಆಡಲಿರುವ ಕೊನೆಯ ಗ್ರೂಪ್ ಪಂದ್ಯಕ್ಕಿಂತ ಮೊದಲು ಹೀಲಿ ಅವರ ಫಿಟ್ನೆಸ್ ಅನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದು ಕ್ರಿಕೆಟ್ ಆಸ್ಟ್ರೇಲಿಯ ಖಚಿತಪಡಿಸಿದೆ.

ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯ ಕ್ರಿಕೆಟ್ ತಂಡವು ಬುಧವಾರ ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ 2ನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News