×
Ad

ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿಯನ್ನು ಮತ್ತೊಮ್ಮೆ ಮುಂದೂಡಿದ ಆಸ್ಟ್ರೇಲಿಯ

Update: 2024-03-19 20:50 IST

Photo: PTI 

ಹೊಸದಿಲ್ಲಿ: ಈ ವರ್ಷದ ಆಗಸ್ಟ್ ನಲ್ಲಿ ನಿಗದಿಯಾಗಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಪುರುಷರ ಟಿ20 ಅಂತರ್ರಾಷ್ಟ್ರೀಯ ಸರಣಿಯನ್ನು ಮುಂದೂಡಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯ(ಸಿಎ)ಪ್ರಕಟಿಸಿದೆ.

ಆಸ್ಟ್ರೇಲಿಯ ಸರಕಾರದೊಂದಿಗೆ ಹೆಚ್ಚಿನ ಚರ್ಚೆಯ ನಂತರ ಈ ನಿರ್ಧಾರಕ್ಕೆ ಬರಲಾಗಿದೆ.

ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಹಾಗೂ ಹುಡುಗಿಯರ ಪರಿಸ್ಥಿತಿಯು ಹದಗೆಡುತ್ತಿವೆ ಎಂಬುದು ಸರಕಾರದ ಸಲಹೆಯಾಗಿದೆ. ಈ ಕಾರಣಕ್ಕಾಗಿ ನಾವು ಅಫ್ಘಾನಿಸ್ತಾನ ವಿರುದ್ಧದ ದ್ವಿಪಕ್ಷೀಯ ಸರಣಿಯನ್ನು ಮುಂದೂಡುತ್ತೇವೆ ಎಂದು ಕ್ರಿಕೆಟ್ ಆಸ್ಟ್ರೇಲಿಯ(ಸಿಎ) ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ವಿಶ್ವದಾದ್ಯಂತ ಕ್ರಿಕೆಟ್ ನಲ್ಲಿ ಮಹಿಳೆಯರು ಹಾಗೂ ಹುಡುಗಿಯರ ಭಾಗವಹಿಸುವಿಕೆಯನ್ನು ಬೆಂಬಲಿಸಲು ಸಿಎ ತನ್ನ ಬಲವಾದ ಬದ್ಧತೆಯನ್ನು ಮುಂದುವರಿಸಿದೆ. ಭವಿಷ್ಯದಲ್ಲಿ ದ್ವಿಪಕ್ಷೀಯ ಪಂದ್ಯಗಳ ಪುನರಾರಂಭವನ್ನು ಬೆಂಬಲಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ನಿರ್ಧರಿಸಲು ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿಯೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅದರೊಂದಿಗೆ ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯ ಹೇಳಿಕೆಯೊಂದರಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News