×
Ad

ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ವಿಶ್ವಕಪ್ ನಿಂದ ಹೊರಕ್ಕೆ

Update: 2023-11-02 22:41 IST

ಮಿಚೆಲ್ ಮಾರ್ಶ್ ( Photo- PTI )

ಮುಂಬೈ: ಆಸ್ಟ್ರೇಲಿಯ ಆಲ್‌ರೌಂಡರ್ ಮಿಚೆಲ್ ಮಾರ್ಶ್ ವೈಯಕ್ತಿಕ ಕಾರಣಗಳಿಗಾಗಿ ಐಸಿಸಿ ವಿಶ್ವಕಪ್‌ನಿಂದ ಅನಿರ್ದಿಷ್ಟಾವಧಿವರೆಗೆ ಹೊರಹೋಗಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯ ಗುರುವಾರ ಪ್ರಕಟಿಸಿದೆ.

ಅವರು ಎಷ್ಟು ಸಮಯ ಲಭ್ಯರಿರುವುದಿಲ್ಲ ಮತ್ತು ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ಇಳಿಸಲಾಗುವುದೇ ಎನ್ನುವುದು ಸ್ಪಷ್ಟವಾಗಿಲ್ಲ.

‘‘ಅವರು ತಂಡಕ್ಕೆ ಯಾವಾಗ ಮರಳುತ್ತಾರೆ ಎನ್ನುವುದು ಸ್ಪಷ್ಟವಾಗಿಲ್ಲ’’ ಎಂದು ಪತ್ರಿಕಾ ಹೇಳಿಕೆಯೊಂದರಲ್ಲಿ ಕ್ರಿಕೆಟ್ ಆಸ್ಟ್ರೇಲಿಯ ಹೇಳಿದೆ.

ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ಶನಿವಾರ ಅಹ್ಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಮೀನಖಂಡದ ಗಾಯಕ್ಕೊಳಗಾಗಿದ್ದ ಆಲ್‌ರೌಂಡರ್ ಮಾರ್ಕಸ್ ಸ್ಟೋಯಿನಿಸ್ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ. ಮಾರ್ಶ್ ಸ್ಥಾನದಲ್ಲಿ ಕ್ಯಾಮರೂನ್ ಗ್ರೀನ್ ಆಡುವ ನಿರೀಕ್ಷೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News