×
Ad

T20 ಸರಣಿಯ ಇನ್ನುಳಿದ ಪಂದ್ಯಗಳಿಂದ ಅಕ್ಷರ್ ಪಟೇಲ್ ಔಟ್

Update: 2025-12-15 23:32 IST

photo: timesofindia

ಹೊಸದಿಲ್ಲಿ, ಡಿ.15: ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಅಕ್ಷರ್ ಪಟೇಲ್ ಅನಾರೋಗ್ಯದ ಕಾರಣ ದಕ್ಷಿಣ ಆಫ್ರಿಕಾ ತಂಡ ವಿರುದ್ಧದ ಟಿ-20 ಸರಣಿಯ ಇನ್ನುಳಿದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಸೋಮವಾರ ತಿಳಿಸಿದೆ.

ರವಿವಾರ ನಡೆದಿದ್ದ ಮೂರನೇ ಪಂದ್ಯದಿಂದಲೂ ಅಕ್ಷರ್ ವಂಚಿತರಾಗಿದ್ದರು.

ಅಕ್ಷರ್ ಲಕ್ನೊದಲ್ಲಿ ತಂಡದೊಂದಿಗೆ ಇರಲಿದ್ದಾರೆ. ಅಲ್ಲಿ ಅವರು ವೈದ್ಯಕೀಯ ತಪಾಸಣೆಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಸರಣಿಯಲ್ಲಿ ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಅಕ್ಷರ್ 104.76ರ ಸ್ಟ್ರೈಕ್‌ರೇಟ್‌ನಲ್ಲಿ 44 ರನ್ ಗಳಿಸಿದ್ದರು ಹಾಗೂ ಮೂರು ವಿಕೆಟ್‌ ಗಳನ್ನು ಉರುಳಿಸಿದ್ದರು. ದ್ವಿತೀಯ ಟಿ-20 ಪಂದ್ಯದಲ್ಲಿ ಸೂರ್ಯಕುಮಾರ್ ಬದಲಿಗೆ ಮೂರನೇ ಕ್ರಮಾಂಕಕ್ಕೆ ಭಡ್ತಿ ಪಡೆದು ಆಡಿದ್ದರು. 21 ಎಸೆತಗಳಲ್ಲಿ 21 ರನ್ ಗಳಿಸಿದ್ದರು.

ಐದು ಪಂದ್ಯಗಳ ಸರಣಿಯಲ್ಲಿ ಸದ್ಯ ಭಾರತ ತಂಡವು 2-1 ಮುನ್ನಡೆಯಲ್ಲಿದ್ದು, ಶಹಬಾಝ್ ಅಹ್ಮದ್ ಕೊನೆಯ ಎರಡು ಪಂದ್ಯಗಳಿಗೆ ಅಕ್ಷರ್ ಪಟೇಲ್ ಬದಲಿಗೆ ಆಯ್ಕೆಯಾಗಿದ್ದಾರೆ. ಕೊನೆಯ ಎರಡು ಪಂದ್ಯಗಳು ಲಕ್ನೊ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯಲಿವೆೆ.

ಮೂರನೇ ಟಿ20 ಪಂದ್ಯಕ್ಕೆ ಅಲಭ್ಯರಾಗಿದ್ದ ಜಸ್‌ಪ್ರಿತ್ ಬುಮ್ರಾ ಅವರು ಸರಣಿಯ ಉಳಿದಿರುವ ಪಂದ್ಯಗಳಿಗೆ ಲಭ್ಯ ಇದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News