×
Ad

INDvsBAN: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ

Update: 2023-10-19 14:06 IST

Photo:X/@cricketworldcup

ಪುಣೆ: ಬಾಂಗ್ಲಾದೇಶ ತಂಡದ ನಾಯಕ ಶಾಕಿಬ್ ಅಲ್ ಹಸನ್ ಭಾರತದ ಎದುರಿನ ತಂಡದಿಂದ ಹೊರಗುಳಿದಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.

ವಿಶ್ವಕಪ್ ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಜಯಗಳಿಸಿರುವ ಭಾರತ ತಂಡವು ಬಾಂಗ್ಲಾದೇಶ ತಂಡದ ವಿರುದ್ಧ ಸತತ ನಾಲ್ಕನೇ ಗೆಲುವು ದಾಖಲಿಸುವ ಸನ್ನಾಹದಲ್ಲಿದೆ.

ಶುಕ್ರವಾರ ನ್ಯೂಝಿಲ್ಯಾಂಡ್ ತಂಡದೆದುರು ನಡೆದಿದ್ದ ಪಂದ್ಯದಲ್ಲಿ ಗಾಯಗೊಂಡಿದ್ದ ನಾಯಕ ಶಾಕಿಬ್ ಅಲ್ ಹಸನ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಅನುಪಸ್ಥಿತಿಯಲ್ಲಿ ಶಂತೊ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

ಭಾರತ ತಂಡವು ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳೆರಡಲ್ಲೂ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದು, ಆರಂಭಿಕ ಆಟಗಾರ ಹಾಗೂ ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಹಾರ್ದಿಕ್ ಪಾಂಡ್ಯ ಉತ್ತಮ ಲಯದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬೂಮ್ರಾ, ಮುಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಒಬ್ಬರಿಗಿಂತ ಒಬ್ಬರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News