×
Ad

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದ BCCI

Update: 2026-03-10 12:52 IST

Photo credit: PTI

ಅಹಮದಾಬಾದ್: ಐಸಿಸಿ ಪುರುಷರ ಟಿ20 ವಿಶ್ವಕಪ್‌ ನಲ್ಲಿ ಜಯ ಸಾಧಿಸಿದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ BCCI 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ.

ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಈ ಬಹುಮಾನ ಮೊತ್ತವು ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು 2024ರಲ್ಲಿ ಟಿ20 ವಿಶ್ವಕಪ್ ಗೆದ್ದ ನಂತರ ಘೋಷಿಸಲಾಗಿದ್ದ 125 ಕೋಟಿಗಿಂತ ಹೆಚ್ಚಾಗಿದೆ.

ಈ ಜಯದೊಂದಿಗೆ ಭಾರತ ತಂಡವು ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಸತತವಾಗಿ ಗೆದ್ದ ಮೊದಲ ತಂಡವಾಗಿದ್ದು, ಒಟ್ಟು ಮೂರು ಬಾರಿ ಈ ಟ್ರೋಫಿ ಗೆದ್ದ ಮೊದಲ ತಂಡ ಎಂಬ ದಾಖಲೆಯನ್ನೂ ನಿರ್ಮಿಸಿದೆ.

ಕಳೆದ ವರ್ಷ ಏಕದಿನ ವಿಶ್ವಕಪ್ ಜಯಿಸಿದ ಭಾರತೀಯ ಮಹಿಳಾ ತಂಡಕ್ಕೂ ಬಿಸಿಸಿಐ 51 ಕೋಟಿ ರೂ. ನಗದು ಬಹುಮಾನ ನೀಡಿತ್ತು.

ಪ್ರಸ್ತುತ ಭಾರತವು ಐದು ಪ್ರಮುಖ ಐಸಿಸಿ ಟ್ರೋಫಿಗಳನ್ನು ತನ್ನದಾಗಿಸಿಕೊಂಡಿದೆ. ಪುರುಷರ ಟಿ20 ವಿಶ್ವಕಪ್, ಮಹಿಳಾ ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ, ಅಂಡರ್-19 ಪುರುಷರ ಟಿ20 ವಿಶ್ವಕಪ್ ಮತ್ತು ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಪ್ರಶಸ್ತಿಗಳನ್ನು ಭಾರತ ಗೆದ್ದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News