×
Ad

ದುಲೀಪ್ ಟ್ರೋಫಿಯ ಮೊದಲ ಪಂದ್ಯ ಬೆಂಗಳೂರಿಗೆ ಸ್ಥಳಾಂತರಿಸಲು ಬಿಸಿಸಿಐ ಸಿದ್ದತೆ

Update: 2024-08-12 22:09 IST

PC : PTI 

ಹೊಸದಿಲ್ಲಿ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 5ರಂದು ದುಲೀಪ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಆಯೋಜಿಸಲು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ.

ದುಲೀಪ್ ಟ್ರೋಫಿ ಪಂದ್ಯಾವಳಿಗೆ ಆಂಧ್ರಪ್ರದೇಶದ ಅನಂತಪುರವು ನಿಯೋಜಿತ ಸ್ಥಳವಾಗಿಯೇ ಉಳಿಯಲಿದೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸಹಿತ ಭಾರತದ ಹಲವು ಸ್ಟಾರ್ ಕ್ರಿಕೆಟಿಗರು ದುಲೀಪ್ ಟ್ರೋಫಿಯ ಆರಂಭಿಕ ಪಂದ್ಯದಲ್ಲಿ ಭಾಗವಹಿಸುವ ನಿರೀಕೆ ಇರುವ ಕಾರಣ ಪಂದ್ಯವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಈ ಬೆಳವಣಿಗೆಯನ್ನು ದೃಢಪಡಿಸಿವೆ. ಉಳಿದಿರುವ ಐದು ಚತುರ್ದಿನ ಪಂದ್ಯಗಳು ವೇಳಾಪಟ್ಟಿಯ ಪ್ರಕಾರ ಅನಂತಪುರದಲ್ಲಿಯೇ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News