×
Ad

ಬೆಂಗಳೂರು ಓಪನ್: ಕ್ವಾರ್ಟರ್‌ಫೈನಲ್‌ನಲ್ಲಿ ಮುಗ್ಗರಿಸಿದ ರಾಮ್‌ಕುಮಾರ್

Update: 2024-02-16 22:48 IST

Photo : olympics.com

ಬೆಂಗಳೂರು: ಬೆಂಗಳೂರು ಓಪನ್ ಟೆನಿಸ್ ಟೂರ್ನಮೆಂಟ್‌ನಲ್ಲಿ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಫೈಟ್ ನಲ್ಲಿ ದಕ್ಷಿಣ ಕೊರಿಯಾದ ಹಾಂಗ್ ಸಿಯೊಂಗ್-ಚಾನ್ ಅವರು ಭಾರತದ ರಾಮ್‌ಕುಮಾರ್ ರಾಮನಾಥನ್‌ರನ್ನು 7-5, 5-7, 6-4 ಸೆಟ್‌ಗಳ ಅಂತರದಿಂದ ಮಣಿಸಿದ್ದಾರೆ.

ರಾಮ್‌ಕುಮಾರ್ ಅಗ್ರ ಶ್ರೇಯಾಂಕದ ಇಟಲಿಯ ಲುಕಾ ನಾರ್ಡಿ ಅವರನ್ನು 1-6, 6-4, 6-4 ಸೆಟ್‌ಗಳ ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News