×
Ad

ಚಾಂಪಿಯನ್ಸ್ ಟ್ರೋಫಿ | ಪಾಕಿಸ್ತಾನ 25 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 99 ರನ್

Update: 2025-02-23 16:33 IST

PC |@BCCI

ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಪಾಕಿಸ್ತಾನ ತಂಡವು 25 ಓವರ್ ಗಳಲ್ಲಿ 99 ರನ್ ಗಳಿಸಿದೆ.

ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಇನ್ನಿಂಗ್ಸ್ ಆರಂಭಿಸಿದ ಇಮಾಮ್-ಉಲ್-ಹಕ್ 26 ಎಸೆತಗಳಲ್ಲಿ 10ರನ್ ಗಳಿಸಿ ಔಟಾದರೆ, ಬಾಬರ್ ಅಜಮ್ 26ಎಸೆತಗಳಲ್ಲಿ 5 ಬೌಂಡರಿ ನೆರವಿನೊಂದಿಗೆ 23 ರನ್ ಗಳಿಸಿ ಔಟಾದರು.

ನಂತರ ಕ್ರಮಾಂಕದಲ್ಲಿ ಬಂದ ಸೌದ್ ಶಕೀಲ್, 45 ಎಸೆತಗಳಲ್ಲಿ 1 ಬೌಂಡರಿ ನೆರವಿನೊಂದಿಗೆ 29 ರನ್ ಗಳಿಸಿದರೆ ಅವರಿಗೆ ಜೊತೆಯಾದ ನಾಯಕ ಮೊಹಮ್ಮದ್ ರಿಜ್ವಾನ್ 53 ಎಸೆತಗಳಲ್ಲಿ 2 ಬೌಂಡರಿ ನೆರವಿನೊಂದಿಗೆ 24 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಪಾಕಿಸ್ತಾನ ತಂಡವು 25 ಓವರ್ ಗಳಲ್ಲಿ 99 ರನ್ ಗಳಿಸಿದೆ. ಭಾರತದ ಪರ ಹಾರ್ದಿಕ್ ಪಾಂಡ್ಯ 1 ವಿಕೆಟ್ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News