×
Ad

ಚಾಂಪಿಯನ್ಸ್ ಟ್ರೋಫಿ | ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್‌ ಆಯ್ಕೆ

Update: 2025-02-23 14:10 IST

PC: x.com/IndiaToday

ದುಬೈ: ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಬಿ ಗ್ರೂಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಮುಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಸೆಮಿ ಫೈನಲ್ ಗೇರುವ ವಿಶ್ವಾಸವನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಪಾಕಿಸ್ತಾನ ತಂಡಕ್ಕೆ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಈ ಪಂದ್ಯದಲ್ಲಿ ಭಾರತ ತಂಡವು ಗೆಲುವು ದಾಖಲಿಸಿದರೆ, 8 ತಂಡಗಳಿರುವ ಪಂದ್ಯಾವಳಿಯಲ್ಲಿ ಅಂತಿಮ-4ರಲ್ಲಿ ತನ್ನ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

ತಂಡಗಳು :

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್

ಪಾಕಿಸ್ತಾನ ತಂಡ:

ಬಾಬರ್ ಅಜಮ್, ಇಮಾಮ್-ಉಲ್-ಹಕ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (w/c), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್, ಅಬ್ರಾರ್ ಅಹ್ಮದ್


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News