ದಿಲ್ಲಿ | ಐಪಿಎಲ್ ಪಂದ್ಯದ ವೇಳೆ ಕೇಜ್ರಿವಾಲ್ ಬಂಧನದ ವಿರುದ್ಧ ಘೋಷಣೆ, 6 ಮಂದಿ ಆಪ್ ಕಾರ್ಯಕರ್ತರ ಬಂಧನ

Update: 2024-05-08 17:54 GMT

PC : PTI 

ಹೊಸದಿಲ್ಲಿ : ರಾಷ್ಟ್ರರಾಜಧಾನಿಯಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರ ಘೋಷಣೆಗಳನ್ನು ಕೂಗಿ ಕನಿಷ್ಠ ಆರು ಮಂದಿ ಆಪ್ ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಮಂಗಳವಾರ ದಿಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ತಾನಿ ರಾಯಲ್ಸ್ ನಡುವೆ ನಡೆದ ಐಪಿಎಲ್ ಪಂದ್ಯದ ಸಂದರ್ಭ ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಛಾತ್ರ ಯುವ ಸಂಘರ್ಷ ಸಮಿತಿಯ ಸದಸ್ಯರು ಕೇಜ್ರಿವಾಲ್ ಬಂಧನವನ್ನು ಪ್ರತಿಭಟಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಬಂಧನಕ್ಕೆ ಉತ್ತರವನ್ನು ಮತದಿಂದ ನೀಡಿ) ಎಂಬ ಘೋಷಣೆಯ ಟೀ ಶರ್ಟ್‌ಗಳನ್ನು ಧರಿಸಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಪಂದ್ಯದ ಸಂದರ್ಭ ಅವರು ಕೇಜ್ರಿವಾಲ್ ಬಂಧನ ವಿರೋಧಿಸಿ ಘೋಷಣೆಗಳನ್ನು ಕೂಗಿದ್ದರು.

ಸಾರ್ವಜನಿಕವಾಗಿ ಗದ್ದಲವನ್ನು ಸೃಷ್ಟಿಸಿದ ಆರೋಪದಲ್ಲಿ ಕೆಲವು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸೂಕ್ತ ಕಾನೂನಾತ್ಮಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಅವರನ್ನು ಬಿಡುಗಡೆಗೊಳಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News