ಕೃಷ್ಣ , ಮುಹಮ್ಮದ್ ಸಿರಾಜ್ | Photo Credit : PTI 

ಮುಂಬೈ: ಕಾಲಿನ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ, ನ್ಯೂಝಿಲ್ಯಾಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಿಂದ ಭಾರತ ತಂಡದ ವೇಗಿ ಪ್ರಸಿದ್ಧ ಕೃಷ್ಣ ಹೊರಗುಳಿದಿದ್ದಾರೆ.

ಬಲಗೈ ವೇಗದ ಬೌಲರ್ ಪ್ರಸಿದ್ಧ ಕೃಷ್ಣ ಲಭ್ಯತೆಯು ಅವರ ದೈಹಿಕ ಕ್ಷಮತೆಯನ್ನು ಆಧರಿಸಿತ್ತು. ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಅಗತ್ಯವಿರುವ ಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ಅವರಿಗೆ ಇನ್ನೂ ಹೆಚ್ಚಿನ ಸಮಯದ ಅಗತ್ಯವಿದೆ ಎಂಬ ತೀರ್ಮಾನಕ್ಕೆ ತಂಡಾಡಳಿತ ಬಂದಿದೆ.

‘ರಿಟರ್ನ್ ಟು ಪ್ಲೇ’ ಮೌಲ್ಯಮಾಪನದಲ್ಲಿ ತೇರ್ಗಡೆಯಾದರೆ, ನ್ಯೂಝಿಲ್ಯಾಂಡ್ ‘ಎ’ ವಿರುದ್ಧದ ಮೂರನೇ ಹಾಗೂ ಅಂತಿಮ ನಾಲ್ಕು ದಿನಗಳ ಪಂದ್ಯಕ್ಕಾಗಿ ಪ್ರಸಿದ್ಧ ಕೃಷ್ಣ ಭಾರತ ‘ಎ’ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ. ನ್ಯೂಝಿಲ್ಯಾಂಡ್ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಗೂ ಮುನ್ನ ದೈಹಿಕ ಕ್ಷಮತೆ ಮರಳಿ ಪಡೆಯಲು ಈ ಪಂದ್ಯವು ಅವರಿಗೆ ಉತ್ತಮ ಅವಕಾಶ ನೀಡಲಿದೆ.

ಅದೇ ವೇಳೆ, ಅಕ್ಟೋಬರ್ 31ರಂದು ಪ್ರಾರಂಭವಾಗಲಿರುವ ನ್ಯೂಝಿಲ್ಯಾಂಡ್ ‘ಎ’ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯಕ್ಕಾಗಿ ಮುಹಮ್ಮದ್ ಸಿರಾಜ್ ಭಾರತ ‘ಎ’ ತಂಡವನ್ನು ಸೇರಿಕೊಳ್ಳಲಿದ್ದಾರೆ.

ನವೆಂಬರ್ 4ರಂದು ನಡೆಯಲಿರುವ ನ್ಯೂಝಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕಾಗಿ ನಿತೀಶ್ ಕುಮಾರ್ ರೆಡ್ಡಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜೊತೆಗೆ, ನ್ಯೂಝಿಲ್ಯಾಂಡ್ ‘ಎ’ ವಿರುದ್ಧದ ಮೂರನೇ ಹಾಗೂ ಅಂತಿಮ ನಾಲ್ಕು ದಿನಗಳ ಪಂದ್ಯದಲ್ಲಿ ಭಾರತ ‘ಎ’ ತಂಡದಲ್ಲೂ ಆಡಲಿದ್ದಾರೆ. ನವೆಂಬರ್ 19ರಂದು ಆರಂಭವಾಗಲಿರುವ ಟೆಸ್ಟ್ ಸರಣಿಗೂ ಮುನ್ನ ಇದು ಅವರಿಗೆ ಉಪಯುಕ್ತ ಮ್ಯಾಚ್ ಪ್ರಾಕ್ಟೀಸ್ ಒದಗಿಸಲಿದೆ.

ಪರಿಷ್ಕೃತ ತಂಡಗಳು

ನ್ಯೂಝಿಲ್ಯಾಂಡ್ ‘ಎ’ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯಕ್ಕಾಗಿ ಪರಿಷ್ಕೃತ ಭಾರತ ‘ಎ’ ತಂಡ

ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ದೇವದತ್ತ ಪಡಿಕ್ಕಲ್, ಯಶ್ ರಾಥೋಡ್, ಆರ್. ಸ್ಮರಣ್, ಧ್ರುವ ಜುರೆಲ್ (ನಾಯಕ) (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಮುಹಮ್ಮದ್ ಸಿರಾಜ್, ಆಕಾಶ್ ದೀಪ್, ಶಿಖರ್ ಮೋಹನ್, ಮುಖೇಶ್ ಚೌಧರಿ, ಮುಖೇಶ್ ಕುಮಾರ್, ಮಾನವ್ ಸುತಾರ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್).

ಮೊದಲ ಮೂರು ಏಕದಿನ ಪಂದ್ಯಗಳಿಗಾಗಿ ಪರಿಷ್ಕೃತ ಭಾರತ ತಂಡ

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಮನ್ ಧೀರ್, ಅಂಶುಲ್ ಕಾಂಬೋಜ್, ಗರ್ನೂರ್ ಬ್ರಾರ್, ಋತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಮುಹಮ್ಮದ್ ಸಿರಾಜ್, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ (ಮೊದಲ ಏಕದಿನ ಪಂದ್ಯಕ್ಕೆ ಮಾತ್ರ).

ನಾಲ್ಕನೇ ಮತ್ತು ಐದನೇ ಏಕದಿನ ಪಂದ್ಯಗಳಿಗಾಗಿ ಪರಿಷ್ಕೃತ ಭಾರತ ತಂಡ

ಶ್ರೇಯಸ್ ಅಯ್ಯರ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್, ಉಪನಾಯಕ), ಅಕ್ಷರ್ ಪಟೇಲ್, ನಮನ್ ಧೀರ್, ಆಕಿಬ್ ನಬಿ, ಗರ್ನೂರ್ ಬ್ರಾರ್, ಋತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಮುಹಮ್ಮದ್ ಸಿರಾಜ್, ಯಶ್ ಠಾಕೂರ್, ಕುಲದೀಪ್ ಯಾದವ್.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor