ಮೊದಲ ಟೆಸ್ಟ್| ಭಾರತದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ; 149 ರನ್ ಗೆ ಆಲೌಟ್
Update: 2024-09-20 15:52 IST
Photo: BCCI
ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದ್ದು, ಭಾರತದ ಮಾರಕ ಬೌಲಿಂಗ್ ದಾಳಿಗೆ ಬಾಂಗ್ಲಾದೇಶ 149 ರನ್ ಗಳಿಗೆ ಆಲೌಟ್ ಆಗಿದೆ. ಭಾರತ 227 ರನ್ ಗಳ ಮುನ್ನಡೆ ಸಾಧಿಸಿದೆ.
ಬಾಂಗ್ಲಾ ಪರ ಶಕೀಬ್ ಅಲ್ ಹಸನ್ 32 ರನ್, ಮೆಹದಿ ಹಸನ್ 27 ರನ್, ಲಿಟನ್ ದಾಸ್ 22 ರನ್ ಮತ್ತು ನಾಯಕ ನಜ್ಮುಲ್ ಶಾಂಟೋ 20 ರನ್ ಗಳಿಸಲಷ್ಟೇ ಶಕ್ತರಾದರು.
ವೇಗಿಗಳಾದ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಮತ್ತು ಬಾಂಗ್ಲಾದೇಶಕ್ಕೆ ಆರಂಭದಲ್ಲೇ ಆಘಾತ ನೀಡಿದರು. ಬುಮ್ರಾ 4 ವಿಕೆಟ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.
ಭಾರತವು ಮೊದಲ ಇನ್ನಿಂಗ್ಸ್ ನಲ್ಲಿ 376 ರನ್ ಗಳಿಸಿತ್ತು.