ಭಾರತ ವಿರುದ್ಧ ಮೊದಲ ಟೆಸ್ಟ್ : ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ತಂಡಕ್ಕೆ ಮರಳಿದ ರಿಷಭ್ ಪಂತ್
Update: 2025-11-14 09:41 IST
ಕೋಲ್ಕತ್ತ: ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಹೊಸ ನಾಯಕ ಶುಭಮನ್ ಗಿಲ್ ಅವರ ನೇತೃತ್ವದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಗಾಯದಿಂದ ಚೇತರಿಸಿಕೊಂಡ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ತಂಡಕ್ಕೆ ಮರಳಿದ್ದು, ಇದರಿಂದ ಬ್ಯಾಟಿಂಗ್ ಕ್ರಮ ಬಲಪಟ್ಟಿದೆ.
ಇನಿಂಗ್ಸ್ ಆರಂಭಕ್ಕೆ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್. ರಾಹುಲ್ ಕಣಕ್ಕಿಳಿಯಲಿದ್ದಾರೆ.
ಭಾರತದ ತಂತ್ರದಲ್ಲಿ ಮೂವರು ಆಲ್‌ರೌಂಡರ್ ಸೇರಿದಂತೆ ಆರು ಬೌಲರ್‌ಗಳಿಗೆ ಅವಕಾಶ ನೀಡಲಾಗಿದೆ. ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ನ್ ಸುಂದರ್ ಆಲ್‌ರೌಂಡರ್ ಪಟ್ಟಿಯಲ್ಲಿ ಇದ್ದರೆ, ಸ್ಪಿನ್ ವಿಭಾಗದಲ್ಲಿ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.
ವೇಗದ ದಾಳಿಯನ್ನು ಜಸ್‌ಪ್ರೀತ್ ಬೂಮ್ರಾ ಮತ್ತು ಮುಹಮ್ಮದ್ ಸಿರಾಜ್ ಮುನ್ನಡೆಸಲಿದ್ದಾರೆ.