×
Ad

ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ

Update: 2026-03-09 21:30 IST

ಗ್ಯಾರಿ ಕರ್ಸ್ಟನ್ | Photo Credit : ICC 

ಚೆನ್ನೈ, ಮಾ.9: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಗ್ಯಾರಿ ಕರ್ಸ್ಟನ್ ಅವರನ್ನು ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್‌ಎಲ್‌ಸಿ) ಸೋಮವಾರ ಪ್ರಕಟಿಸಿದೆ.

ಕರ್ಸ್ಟನ್ ಅವರು ಸನತ್ ಜಯಸೂರ್ಯ ಅವರಿಂದ ಕೋಚ್ ಹುದ್ದೆ ವಹಿಸಿಕೊಳ್ಳಲಿದ್ದಾರೆ. ಶ್ರೀಲಂಕಾ ತಂಡವು ಟಿ-20 ವಿಶ್ವಕಪ್‌ನ ಸೂಪರ್-8 ಹಂತದಿಂದ ನಿರ್ಗಮಿಸಿದ ನಂತರ ಜಯಸೂರ್ಯ ಕೋಚ್ ಹುದ್ದೆ ತ್ಯಜಿಸಲು ನಿರ್ಧರಿಸಿದ್ದರು.

ಟಿ-20 ವಿಶ್ವಕಪ್‌ನಲ್ಲಿ ನಮೀಬಿಯಾ ತಂಡದ ಸಲಹೆಗಾರನಾಗಿ ಕಾರ್ಯನಿರ್ವಹಿಸಿದ್ದ 58ರ ವಯಸ್ಸಿನ ಕರ್ಸ್ಟನ್ ಎಪ್ರಿಲ್ 15ರಿಂದ ಅನ್ವಯವಾಗುವಂತೆ ಎರಡು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಕರ್ಸ್ಟನ್ ಅವರು ಭಾರತ ಹಾಗೂ ದಕ್ಷಿಣ ಆಫ್ರಿಕಾದ ಅತ್ಯಂತ ಯಶಸ್ವಿ ಕೋಚ್ ಆಗಿ ಕೆಲಸ ಮಾಡಿದ್ದರು. ಕರ್ಸ್ಟನ್ ಕೋಚ್ ಆಗಿದ್ದಾಗ ಭಾರತ ತಂಡವು ಏಕದಿನ ವಿಶ್ವಕಪ್ ಜಯಿಸಿತ್ತು. ದಕ್ಷಿಣ ಆಫ್ರಿಕಾ ತಂಡವು ಎಲ್ಲ ಮೂರು ಮಾದರಿಯ ಕ್ರಿಕೆಟ್ ರ್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನ ಪಡೆದಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News