×
Ad

25.2 ಕೋಟಿ ರೂ.ಗೆ IPL ನಲ್ಲಿ ಹರಾಜಾದ ಮರುದಿನವೇ ಆ್ಯಷಸ್ ಟೆಸ್ಟ್‌ ನಲ್ಲಿ 'ಮೊಟ್ಟೆ'ಯಿಟ್ಟ ಗ್ರೀನ್!

Update: 2025-12-17 19:47 IST

ಕ್ಯಾಮರೂನ್ ಗ್ರೀನ್ | Photo Credit ; AP \ PTI 


ಅಡಿಲೇಡ್: ಅಬುಧಾಬಿಯಲ್ಲಿ ಡಿ.16ರ ರಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಮಿನಿ ಹರಾಜಿನಲ್ಲಿ 25.2 ಕೋಟಿ ರೂಪಾಯಿ ಮೊತ್ತಕ್ಕೆ ಮಾರಾಟವಾಗಿದ್ದ ಆಸ್ಟ್ರೇಲಿಯಾದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್, ಬುಧವಾರ ಆ್ಯಷಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಸೊನ್ನೆಗೆ ಔಟಾಗಿ ನಿರಾಸೆ ಮೂಡಿಸಿದರು.

ಆಸ್ಟ್ರೇಲಿಯಾ–ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡ 94 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡ ಸಂದರ್ಭದಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಗೆ ಬಂದ ಗ್ರೀನ್ ಕೇವಲ ಎರಡು ಬಾಲ್ ಎದುರಿಸಿದರು. ಜೋಫ್ರಾ ಆರ್ಚರ್ ಎಸೆತದಲ್ಲಿ ಬ್ರೆಡನ್ ಕಾರ್ಸೆಗೆ ಕ್ಯಾಚ್ ನೀಡಿ ಅವರು ವಿಕೆಟ್ ಒಪ್ಪಿಸಿದರು.

ಈ ಆ್ಯಷಸ್ ಸರಣಿಯಲ್ಲಿ ಇದುವರೆಗೆ ಮೂರು ಇನಿಂಗ್ಸ್‌ ಗಳಲ್ಲಿ ಬ್ಯಾಟಿಂಗ್ ಮಾಡಿದ ಗ್ರೀನ್ ಒಟ್ಟು 69 ರನ್ ಗಳಿಸಿದ್ದಾರೆ. ಬೌಲಿಂಗ್ ನಲ್ಲಿ 16 ಓವರ್‌ಗಳನ್ನು ಎಸೆದು ಒಂದೇ ವಿಕೆಟ್ ಪಡೆದಿದ್ದಾರೆ.

ವಿಕೆಟ್‌ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಅವರ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಮೊದಲ ದಿನದ ಅಂತ್ಯಕ್ಕೆ 83 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿದೆ.

ಐಪಿಎಲ್ ಮಿನಿ ಹರಾಜಿನಲ್ಲಿ ಕ್ಯಾಮರೂನ್ ಗ್ರೀನ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡ 25.2 ಕೋಟಿ ರೂಪಾಯಿ ಮೊತ್ತಕ್ಕೆ ತನ್ನ ಬಳಗಕ್ಕೆ ಸೇರಿಸಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News