×
Ad

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್ : ವರುಣ್ ಚಕ್ರವರ್ತಿ ಬದಲಿಗೆ ರವಿ ಬಿಷ್ಣೋಯಿ

Update: 2026-07-12 21:10 IST

ಹರ್ಷಿತ್ ರಾಣಾ | Photo Credit ; PTI  

ಹೊಸದಿಲ್ಲಿ, ಜು.12: ಇಂಗ್ಲೆಂಡ್ ಹಾಗೂ ಝಿಂಬಾಬ್ವೆ ತಂಡಗಳ ವಿರುದ್ಧದ ಮುಂಬರುವ ಸರಣಿಗಾಗಿ ಟೀಮ್ ಇಂಡಿಯಾದಲ್ಲಿ ಬಿಸಿಸಿಐ ರವಿವಾರ ಎರಡು ಬದಲಾವಣೆಗಳನ್ನು ಮಾಡಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಗಾಯಗೊಂಡಿರುವ ಹರ್ಷಿತ್ ರಾಣಾ ಬದಲಿಗೆ ವೇಗದ ಬೌಲರ್ ಪ್ರಿನ್ಸ್ ಯಾದವ್ ಆಯ್ಕೆಯಾಗಿದ್ದಾರೆ.

ಲೆಗ್ ಸ್ಪಿನ್ನರ್ ರವಿ ಬಿಷ್ಣೋಯಿ ಅವರು ಸ್ಪಿನ್ನರ್ ವರುಣ್ ಚಕ್ರವರ್ತಿ ಬದಲಿಗೆ ಝಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಗೆ ಭಾರತ ತಂಡವನ್ನು ಸೇರಿದ್ದಾರೆ.

ಬಿಷ್ಣೋಯಿ ಮೂಲ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ವರುಣ್ ಮಂಡಿರಜ್ಜು ಗಾಯದಿಂದ ಚೇತರಿಸಿಕೊಳ್ಳಲು ಇನ್ನೂ ಹೆಚ್ಚಿನ ಸಮಯ ಅಗತ್ಯವಿರುವ ಹಿನ್ನೆಲೆಯಲ್ಲಿ ಬಿಷ್ಣೋಯಿಗೆ ಅವಕಾಶ ನೀಡಲಾಗಿದೆ.

ಬಿಷ್ಣೋಯಿ ಇಂಗ್ಲೆಂಡ್‌ನಲ್ಲಿ ಭಾರತ ಆಡಿರುವ ಐದು ಪಂದ್ಯಗಳ ಟಿ-20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಇದ್ದರು. ಮೊದಲ ಪಂದ್ಯ ಮಳೆಗಾಹುತಿಯಾಗಿತ್ತು. ಆದರೆ 2ನೇ ಪಂದ್ಯದಲ್ಲಿ 4 ಓವರ್‌ಗಳಲ್ಲಿ 60 ರನ್ ನೀಡಿದ್ದರು.

ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಕ್ಕೆ ಭಾರತ ತಂಡ: ಶುಭಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್(ಉಪ ನಾಯಕ), ಕೆ.ಎಲ್.ರಾಹುಲ್(ವಿಕೆಟ್‌ಕೀಪರ್), ಇಶಾನ್ ಕಿಶನ್(ವಿಕೆಟ್‌ಕೀಪರ್), ವಾಶಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ಕುಲದೀಪ ಯಾದವ್, ಜಸ್‌ಪ್ರಿತ್ ಬುಮ್ರಾ, ಪ್ರಸಿದ್ಧ ಕೃಷ್ಣ, ಅರ್ಷದೀಪ ಸಿಂಗ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News