×
Ad

ಏಷ್ಯಾ ಕಪ್ | ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್‌ ಗೆ ದಂಡ ವಿಧಿಸಿದ ಐಸಿಸಿ

Update: 2025-09-26 23:05 IST

PC | NDTV

ದುಬೈ: ಪಾಕಿಸ್ತಾನದ ವಿರುದ್ಧ ಸೆ. 14ರಂದು ನಡೆದ ಏಷ್ಯಾ ಕಪ್ ಗುಂಪು ಹಂತದ ಪಂದ್ಯದಲ್ಲಿ ನೀಡಿದ ಹೇಳಿಕೆಯ ಹಿನ್ನೆಲೆಯಲ್ಲಿ, ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಂದ್ಯ ಶುಲ್ಕದ 30 ಶೇಕಡಾ ದಂಡ ವಿಧಿಸಿದೆ.

ಭಾರತವು ಆ ಪಂದ್ಯದಲ್ಲಿ ಏಳು ವಿಕೆಟ್‌ಗಳ ಜಯ ಸಾಧಿಸಿದ ಬಳಿಕ, ಯಾದವ್ ಈ ಗೆಲುವನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ಸಮರ್ಪಿಸಿದ್ದರು. ಜೊತೆಗೆ, ಪಹಲ್ಗಾಮ್ ದಾಳಿಯ ಸಂತ್ರಸ್ತರ ಕುಟುಂಬಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ಈ ಹೇಳಿಕೆಯನ್ನು ಪಾಕಿಸ್ತಾನ ವಿರೋಧಿಸಿ ಅಧಿಕೃತ ದೂರು ಸಲ್ಲಿಸಿತ್ತು.

ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಚಾರಣೆಯ ನಂತರ ಐಸಿಸಿ ಈ ನಿರ್ಧಾರವನ್ನು ಪ್ರಕಟಿಸಿದೆ. ಆದರೆ, ಈ ತೀರ್ಪಿನ ವಿರುದ್ಧ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೇಲ್ಮನವಿ ಸಲ್ಲಿಸಿರುವುದಾಗಿ ಪಿಟಿಐ ವರದಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News