ಹರ್ಮನ್‌ಪ್ರೀತ್ | Photo Credit : PTI 

ದುಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಐಸಿಸಿ ಮಹಿಳೆಯರ ಏಕದಿನ ರ‍್ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಭಡ್ತಿ ಪಡೆದು 8ನೇ ಸ್ಥಾನ ಪಡೆದಿದ್ದಾರೆ.

ಆದರೆ ಹಾಲಿ ನಾಯಕಿ ಸ್ಮೃತಿ ಮಂಧಾನ ಅಗ್ರ ಸ್ಥಾನ ಕಳೆದುಕೊಂಡಿದ್ದಾರೆ. ಝಿಂಬಾಬ್ವೆ ವಿರುದ್ಧ 32 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾದ ನಾಯಕಿ ಲೌರಾ ವೊಲ್ವಾರ್ಟ್ ಅಗ್ರ ಸ್ಥಾನಕ್ಕೇರಿದ್ದಾರೆ.

ಝಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಹರ್ಮನ್‌ಪ್ರೀತ್ ಹಾಗೂ ಆಲ್‌ರೌಂಡರ್ ದೀಪ್ತಿ ಶರ್ಮಾ ಶತಕ ಸಿಡಿಸಿ ಭಾರತ ತಂಡವು 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಲು ನೆರವಾಗಿದ್ದರು. ಏಶ್ಯನ್ ಗೇಮ್ಸ್‌ನಲ್ಲಿ ಭಾರತ ತಂಡ ಸತತ ಚಿನ್ನದ ಪದಕ ಜಯಿಸಲು ನೇತೃತ್ವ ವಹಿಸಿದ ನಂತರ ಹರ್ಮನ್‌ಪ್ರೀತ್ ನಾಯಕತ್ವವನ್ನು ತ್ಯಜಿಸಿದ್ದರು.

ಬ್ಯಾಟರ್‌ಗಳ ಪಟ್ಟಿಯಲ್ಲಿ ನಾಲ್ಕು ಸ್ಥಾನ ಭಡ್ತಿ ಪಡೆದಿರುವ ದೀಪ್ತಿ ಶರ್ಮಾ 23ನೇ ರ‍್ಯಾಂಕ್‌ಗೆ ತಲುಪಿದ್ದಾರೆ. ಎರಡು ಸ್ಥಾನ ಮೇಲಕ್ಕೇರಿ ಆಲ್‌ರೌಂಡರ್‌ಗಳ ರ್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲೂ ದೀಪ್ತಿ ಎಂಟನೇ ಸ್ಥಾನಕ್ಕೇರಿದ್ದಾರೆ ಎಂದು ಐಸಿಸಿ ತಿಳಿಸಿದೆ.

ಭಾರತದ ಯುವ ಆಟಗಾರ್ತಿ ಪ್ರತಿಕಾ ರಾವಲ್ ಏಕದಿನ ಬ್ಯಾಟರ್‌ಗಳ ಪಟ್ಟಿಯಲ್ಲಿ ಜೀವನಶ್ರೇಷ್ಠ ಸಾಧನೆ ಮಾಡಿದ್ದು, ಏಳು ಸ್ಥಾನ ಮೇಲಕ್ಕೇರಿ 21ನೇ ರ್ಯಾಂಕ್ ತಲುಪಿದ್ದಾರೆ.

ಹೊಸ ಟಿ-20 ರ್ಯಾಂಕಿಂಗ್‌ನ ಬ್ಯಾಟರ್‌ಗಳ ಪಟ್ಟಿಯಲ್ಲಿ ಶಫಾಲಿ ವರ್ಮಾ(ಮೂರನೇ)ಹಾಗೂ ಮಂಧಾನ(ನಾಲ್ಕನೇ)ಒಂದು ಸ್ಥಾನ ಮೇಲೇರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor