×
Ad

ಚೀನಾವನ್ನು ಸೋಲಿಸಿ 5 ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪ್ರಶಸ್ತಿ ಗೆದ್ದ ಭಾರತ

Update: 2024-09-17 18:02 IST
PC : X \ @TheHockeyIndia

ಬೀಜಿಂಗ್: ಹಾಲಿ ಚಾಂಪಿಯನ್‌ ಭಾರತ ತಂಡವು ಮಂಗಳವಾರ ನಡೆದ ಹೀರೋ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯಲ್ಲಿ ಆತಿಥೇಯ ಚೀನಾ ವಿರುದ್ಧ 1-0 ಅಂತರದಿಂದ ಸೋಲಿಸಿ ಐದನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ರೋಚಕ ಪಂದ್ಯದಲ್ಲಿ ಮೊದಲ ಮೂರು ಕ್ವಾರ್ಟರ್‌ಗಳಲ್ಲಿ ಭಾರತ ತಂಡಕ್ಕೆ ಚೀನಾವು ಗೋಲು ಗಳಿಸಲು ಅವಕಾಶ ನೀಡಲಿಲ್ಲ. ಅಂತಿಮವಾಗಿ, ಡಿಫೆಂಡರ್ ಜುಗ್ರಾಜ್ ಸಿಂಗ್ ಅವರು 51 ನೇ ನಿಮಿಷದಲ್ಲಿ ಫೀಲ್ಡ್ ಗೋಲು ಗಳಿಸಿ ಭಾರತ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News