ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಪಾಕ್ ತಂಡಕ್ಕೆ ಸೋಲುಣಿಸಿದ ಭಾರತದ ಹಾಕಿ ತಂಡ
Update: 2024-09-14 17:20 IST
Credit: Hockey India
ಹೊಸದಿಲ್ಲಿ: ʼಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024ʼ ಪಂದ್ಯದಲ್ಲಿ ಭಾರತ- ಪಾಕಿಸ್ತಾನ ತಂಡವನ್ನು ಸೋಲಿಸಿದ್ದು, ಹಾಕಿ ಟೂರ್ನಿಯಲ್ಲಿ ಭಾರತ ತಂಡ ಗೆಲುವಿನ ನಾಗಲೋಟವನ್ನು ಮುಂದುವರಿಸಿದೆ.
ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲು ಗಳಿಸಿ ಅಮ್ಮದ್ ಬಟ್ ನೇತೃತ್ವದ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತ 2-1 ಗೋಲುಗಳಿಂದ ಪಾಕಿಸ್ತಾನ ತಂಡವನ್ನು ಸೋಲಿಸಿದೆ.
ಭಾರತ ಈಗಾಗಲೇ ಐದು ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಕಳೆದ ವರ್ಷ ಹಾಂಗ್‌ಝೌ ಏಷ್ಯನ್ ಕ್ರೀಡೆಗಳಲ್ಲಿ ಭಾರತ 10–2 ಗೋಲುಗಳಿಂದ ಪಾಕಿಸ್ತಾನ ತಂಡವನ್ನು ಸೋಲಿಸಿತ್ತು. 2022ರಲ್ಲಿ ಜಕಾರ್ತಾದಲ್ಲಿ ನಡೆದ ಏಷ್ಯಾ ಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ 1–1 ಡ್ರಾ ಸಾಧಿಸಿತ್ತು.