×
Ad

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಭಾರತದ ಕೈ ವಶ

Update: 2023-09-24 22:23 IST

Photo: X/@ICC

ಇಂದೋರ್ : ಇಲ್ಲಿನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ 99 ರನ್ಗಳ ಅಂತರದಿಂದ ಜಯ ಗಳಿಸುವ ಮೂಲಕ ಭಾರತ 2-0 ದಿಂದ ಸರಣಿ ತನ್ನದಾಗಿಸಿಕೊಂಡಿದೆ.

ಆರಂಭದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 399 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಡಕ್ವರ್ಥ್ ಲೂಯಿಸ್ ನಿಯಮದಂತೆ 33 ಓವರ್ ಗಳಲ್ಲಿ 317 ರನ್ಗಳ ಪರಿಷ್ಕೃತ ಗುರಿ ನೀಡಲಾಗಿತ್ತು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 28.2 ಓವರ್ಗಳಲ್ಲಿ 217 ರನ್ ಗಳಿಗೇ ಆಲ್ ಔಟ್ ಆಯಿತು.

ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 53, ಸೀನ್ ಅಬೋಟ್ 54 ರನ್ ಗಳಿಸಿದರು. ಭಾರತದ ಬೌಲರ್ಗಳಾದ ರವೀಂದ್ರ ಜಡೇಜಾ, ಆರ್ ಅಶ್ವಿನ್ ತಲಾ ಮೂರು ವಿಕೆಟ್ ಪಡೆದರು. ಪ್ರಸಿದ್ಧ ಕೃಷ್ಣ 2, ಮೊಹಮ್ಮದ್ ಶಮಿ 1 ವಿಕೆಟ್ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News