×
Ad

7 ವರ್ಷಗಳ ಬಳಿಕ ಕಿವೀಸ್ ನಾಡಿನಲ್ಲಿ ಟೆಸ್ಟ್ ಸರಣಿಗೆ ಭಾರತ ಸಜ್ಜು

Update: 2026-06-03 23:45 IST

Photo : IANS

ಹೊಸದಿಲ್ಲಿ, ಜೂ.3: ಭಾರತ ಕ್ರಿಕೆಟ್ ತಂಡವು ಈ ವರ್ಷಾಂತ್ಯದಲ್ಲಿ ಐದು ಪಂದ್ಯಗಳ ಟ್ವೆಂಟಿ-20 ಸರಣಿ, ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ನ್ಯೂಝಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದೆ ಎಂದು ನ್ಯೂಝಿಲ್ಯಾಂಡ್ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ.

ಅಕ್ಟೋಬರ್‌ನಿಂದ ಡಿಸೆಂಬರ್‌ ವರೆಗೆ ನಡೆಯಲಿರುವ ಈ ಪ್ರವಾಸದ ಪಂದ್ಯಗಳು ನ್ಯೂಝಿಲ್ಯಾಂಡ್‌ ನ ಐದು ಕೇಂದ್ರಗಳಲ್ಲಿ ನಡೆಯಲಿವೆ. 2019-20ರ ಋತುವಿನ ಬಳಿಕ ಭಾರತ ತಂಡವು ಮೊದಲ ಬಾರಿಗೆ ನ್ಯೂಝಿಲ್ಯಾಂಡ್‌ನಲ್ಲಿ ಟೆಸ್ಟ್ ಸರಣಿಯನ್ನಾಡಲಿದ್ದು, 2022ರ ಬಳಿಕ ಸೀಮಿತ ಓವರ್‌ಗಳ ಸರಣಿಯಲ್ಲೂ ಭಾಗವಹಿಸಲಿದೆ.

ಅಕ್ಟೋಬರ್ 22ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ಮೊದಲ ಟ್ವೆಂಟಿ-20 ಪಂದ್ಯದೊಂದಿಗೆ ಸರಣಿ ಆರಂಭವಾಗಲಿದೆ. ಎರಡನೇ ಪಂದ್ಯವೂ ಕ್ರೈಸ್ಟ್‌ಚರ್ಚ್‌ನಲ್ಲೇ ನಡೆಯಲಿದ್ದು, ಉಳಿದ ಪಂದ್ಯಗಳು ವೆಲ್ಲಿಂಗ್ಟನ್, ಆಕ್ಲೆಂಡ್ ಹಾಗೂ ಹ್ಯಾಮಿಲ್ಟನ್‌ನಲ್ಲಿ ನಡೆಯಲಿವೆ.

ಐದು ಪಂದ್ಯಗಳ ಏಕದಿನ ಸರಣಿ ನವೆಂಬರ್ 4ರಿಂದ ಆರಂಭವಾಗಲಿದ್ದು, ಆಕ್ಲೆಂಡ್, ವೆಲ್ಲಿಂಗ್ಟನ್, ಹ್ಯಾಮಿಲ್ಟನ್ ಹಾಗೂ ಮೌಂಟ್ ಮೌಂಗನುಯಿಯಲ್ಲಿ ಪಂದ್ಯಗಳು ನಡೆಯಲಿವೆ.

ಮೊದಲ ಟೆಸ್ಟ್ ಪಂದ್ಯ ನವೆಂಬರ್ 19ರಿಂದ 23ರವರೆಗೆ ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದ್ದು, ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನವೆಂಬರ್ 27ರಿಂದ ಡಿಸೆಂಬರ್ 1ರವರೆಗೆ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ.

2027ರ ಏಕದಿನ ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಆಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳುವ ಅವಕಾಶವೂ ದೊರೆಯಲಿದೆ.

ಭಾರತ ಮತ್ತು ನ್ಯೂಝಿಲ್ಯಾಂಡ್ ತಂಡಗಳು ಕೊನೆಯದಾಗಿ 2026ರ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಿದ್ದು, ಭಾರತ ಸುಲಭ ಗೆಲುವಿನೊಂದಿಗೆ ಪ್ರಶಸ್ತಿ ಉಳಿಸಿಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News