×
Ad

ನಿಧಾನಗತಿಯ ಬೌಲಿಂಗ್ ಗೆ ಭಾರತಕ್ಕೆ ದಂಡ: ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಅಂಕಪಟ್ಟಿಯಲ್ಲಿ 2 ಅಂಕ ಕಡಿತ

Update: 2023-12-29 23:42 IST

Photo: twitter.com/BCCI

ಹೊಸದಿಲ್ಲಿ: ಸೆಂಚೂರಿಯನ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇನಿಂಗ್ಸ್ ಅಂತರದಿಂದ ಸೋತು ನಿರಾಸೆಗೊಂಡಿರುವ ಭಾರತಕ್ಕೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕೆ ಪಂದ್ಯ ಶುಲ್ಕದಲ್ಲಿ ಶೇ.10ರಷ್ಟು ದಂಡ ವಿಧಿಸಲಾಗಿದೆ. ಹೀಗಾಗಿ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್(ಡಬ್ಲ್ಯುಟಿಸಿ)ಪಾಯಿಂಟ್ಸ್ ನಲ್ಲಿ ಎರಡಂಕವನ್ನು ಕಳೆದುಕೊಂಡಿದೆ.

ನಿಗದಿತ ಸಮಯದೊಳಗೆ ಓವರ್ಗಳನ್ನು ಪೂರ್ಣಗೊಳಿಸುವಲ್ಲಿ ವಿಫಲವಾದ ಭಾರತ ಕ್ರಿಕೆಟ್ ತಂಡಕ್ಕೆ ದಂಡ ವಿಧಿಸಲಾಗಿದೆ. ಭಾರತ ತಂಡದ ಆಟಗಾರರು ಪಂದ್ಯಶುಲ್ಕದಲ್ಲಿ ಶೇ.10ರಷ್ಟನ್ನು ದಂಡವಾಗಿ ಪಾವತಿಸಬೇಕಾಗಿದೆ.

ಐಸಿಸಿ ಮ್ಯಾಚ್ ರೆಫರಿಗಳ ಎಲೈಟ್ ಪ್ಯಾನೆಲ್ ನ ಕ್ರಿಸ್ ಬ್ರಾಡ್ ಅವರು ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ. ಭಾರತದ ನಾಯಕ ರೋಹಿತ್ ಶರ್ಮಾ ದಂಡ ಪಾವತಿಸಲು ಸಮ್ಮತಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಅಂಕಪಟ್ಟಿಯಲ್ಲಿ ಭಾರತವು ಆರನೇ ಸ್ಥಾನಕ್ಕೆ ಕುಸಿದಿದೆ. 38.89 ಜಯದ ಶೇಕಡವಾರು ಹೊಂದಿದೆ. ಮತ್ತೊಂದೆಡೆ ಮೊದಲ ಸರಣಿ ಆಡುತ್ತಿರುವ ದಕ್ಷಿಣ ಆಫ್ರಿಕಾ ಅಗ್ರ ಸ್ಥಾನದಲ್ಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News