×
Ad

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ತಂಡಕ್ಕೆ ಮರಳಿದ ಸಿರಾಜ್, ಅಯ್ಯರ್

ತಂಡದಲ್ಲಿ ಸ್ಥಾನ ಉಳಿಸಿಕೊಂಡ ಕೊಹ್ಲಿ, ರೋಹಿತ್ ಶರ್ಮ; ಶಮಿಗೆ ಸಿಗದ ಸ್ಥಾನ

Update: 2026-01-03 19:32 IST

Photo| PTI 

ಹೊಸ ದಿಲ್ಲಿ: ಜನವರಿ 11ರಿಂದ ನ್ಯೂಝಿಲೆಂಡ್ ತಂಡದೆದುರು ಪ್ರಾರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ 15 ಸದಸ್ಯರ ಭಾರತ ತಂಡ ಪ್ರಕಟವಾಗಿದ್ದು, ಗಾಯಗೊಂಡು ತಂಡದಿಂದ ಹೊರಗುಳಿದಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಉಪ ನಾಯಕರಾಗಿ ತಂಡಕ್ಕೆ ಮರಳಿದ್ದಾರೆ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಸ್ಟಾರ್ ಬ್ಯಾಟರ್ ಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮ ಕೂಡಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದ ವೇಗಿ ಮುಹಮ್ಮದ್ ಶಮಿ ಈ ಬಾರಿಯೂ ತಂಡದಲ್ಲಿ ಸ್ಥಾನ ಪಡೆದಿಲ್ಲ. ಆದರೆ, ಮತ್ತೊಬ್ಬ ವೇಗಿ ಸಿರಾಜ್ ಮುಹಮ್ಮದ್ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ದೇಶೀಯ ಕ್ರಿಕೆಟ್ ನಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಮುಂಬರುವ ಟಿ-20 ವಿಶ್ವಕಪ್ ದೃಷ್ಟಿಯಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಮತ್ತೊಬ್ಬ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಜನವರಿ 11ರಂದು ಏಕದಿನ ಸರಣಿಯ ಮೊದಲ ಪಂದ್ಯ ವಡೋದರದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡನೆಯ ಪಂದ್ಯ ಜನವರಿ 14ರಂದು ರಾಜ್ ಕೋಟ್‌ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯಲಿದ್ದು, ಮೂರನೆಯ ಪಂದ್ಯ ಇಂದೋರ್ ನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಎಲ್ಲ ಪಂದ್ಯಗಳೂ ಮಧ್ಯಾಹ್ನ 1.30ರಿಂದ ಪ್ರಾರಂಭಗೊಳ್ಳಲಿವೆ.

ಭಾರತ ತಂಡ:

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪ ನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮುಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲ್ ದೀಪ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News