×
Ad

ನ್ಯೂಝಿಲ್ಯಾಂಡ್ ವಿರುದ್ಧದ ಟೆಸ್ಟ್ | ದ್ವಿತೀಯ ಇನಿಂಗ್ಸ್ ನಲ್ಲಿ ಪುಟಿದೆದ್ದ ಭಾರತ

Update: 2024-10-18 17:26 IST

Photo:X/BCCI

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ನ್ಯೂಝಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡವು ಮರು ಹೋರಾಟ ನೀಡುತ್ತಿದೆ.

ಮೊದಲ ಇನ್ನಿಂಗ್ಸ್ ಅಂತ್ಯಕ್ಕೆ ನ್ಯೂಝಿಲ್ಯಾಂಡ್ 402 ರನ್ ಗಳಿಸಿ 356 ರನ್‌ ಗಳ ಮುನ್ನಡೆ ಸಾಧಿಸಿತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡವು ದಿನದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿದೆ. ವಿರಾಟ್ ಕೊಹ್ಲಿ 70 ಗಳಿಸಿ ಔಟಾಗಿದ್ದಾರೆ. ಸರ್ಫರಾಝ್ ಖಾನ್ ಅಜೇಯ 70 ರನ್‌ ಗಳಿಸಿದ್ದಾರೆ.

ಇನ್ನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ (35) ಮತ್ತು ರೋಹಿತ್ ಶರ್ಮ 52 ರನ್ ಗಳಿಸಿ ಉತ್ತಮ ಆರಂಭ ನೀಡಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News