×
Ad

ಟೆಸ್ಟ್ ಕ್ರಿಕೆಟ್ ನಲ್ಲಿ ವಿಶ್ವ ದಾಖಲೆ ಬರೆದ ಭಾರತದ ಮಹಿಳಾ ತಂಡ

Update: 2023-12-16 14:26 IST

Photo:X/@JayShah

ಮುಂಬೈ: ಮಹಿಳಾ ಕ್ರಿಕೆಟ್ ನಲ್ಲಿ ನೂರನೇ ಟೆಸ್ಟ್ ಪಂದ್ಯವಾಡಿದ ಏಕೈಕ ಮಹಿಳಾ ತಂಡವಾದ ಇಂಗ್ಲೆಂಡ್, ಭಾರತೀಯ ತಂಡದೆದುರಿನ ಏಕೈಕ ಟೆಸ್ಟ್ ಪಂದ್ಯದಲ್ಲಿ 347 ರನ್ ಗಳ ಹೀನಾಯ ಸೋಲು ಅನುಭವಿಸಿದೆ.

ಮಹಿಳೆಯರ ಟೆಸ್ಟ್ ಪಂದ್ಯದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದ ಭಾರತ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು.

ಇಲ್ಲಿನ ಡಿ ವೈ ಪಾಟೀಲ ಸ್ಟೇಡಿಯಮ್ ನಲ್ಲಿ ನಡೆದ ಪಂದ್ಯದಲ್ಲಿ ನಾಲ್ವರ ಅರ್ಧ ಶತಕದ ಬಲದಿಂದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 428 ರನ್ ಗಳಿಸಿತು. ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 136 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. 5.3 ಓವರ್ ಬೌಲ್ ಮಾಡಿದ ದೀಪ್ತಿ ಶರ್ಮಾ ಕೇವಲ 7 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು.

ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ 6 ವಿಕೆಟ್ ಕಳೆದುಕೊಂಡು 186 ರನ್ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. 479 ರನ್ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಕೇವಲ 131 ರನ್ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News