Photo Credit : X@BCCI
ತಿರುವನಂತಪುರಂ: ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಅವರ ಶತಕಗಳ ನೆರವಿನಿಂದ ಭಾರತ ತಂಡವು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು.